Coastal Bulletin

ಬಂಟ್ವಾಳ: ಕರ್ತವ್ಯ ಪಾಲನೆಯ ದೃಷ್ಟಿಯಿಂದ ಶಾಲೆಗೆ ರಸ್ತೆ ಮಾಡಿದ್ದು, ನಿರಂತರವಾಗಿ ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡಿದ ತೃಪ್ತಿ ಇದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಹೇಳಿದರು.

ಅವರು ಮಾಣಿ ಕರ್ನಾಟಕ ವಿದ್ಯಾಸಂಸ್ಥೆಗೆ ಶಾಸಕರ ಪ್ರಾದೇಶಿಕ ಅಭಿವೃದ್ಧಿ ಅನುದಾನ ೧೦ ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ರಸ್ತೆಯನ್ನು ಉದ್ಘಾಟಿಸಿದರು. ದ.ಕ.ಜಿಲ್ಲೆಯಲ್ಲಿ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳು ಅಂತಾರಾಷ್ಟ್ರೀಯ ರಸ್ತೆಗಳಾಗಿ ಮೇಲ್ದರ್ಜೆಗೇರುತ್ತಿದ್ದು, ನಿತಿನ್ ಘಡ್ಕರಿಯಂತಹ ನಾಯಕರು ಸಚಿವರಾದ ಕಾರಣ ಇದು ಸಾಧ್ಯವಾಗಿದೆ. ಅಭಿವೃದ್ಧಿಯೇ ನಮ್ಮ ಸರಕಾರಗಳ ಧ್ಯೇಯವಾಗಿದೆ ಎಂದರು.

ವೇದಿಕೆಯಲ್ಲಿ ಮಾಣಿ ಗ್ರಾ.ಪಂ.ಅಧ್ಯಕ್ಷ ಬಾಲಕೃಷ್ಣ ಆಳ್ವ, ಮಾಣಿ ವಿದ್ಯಾಭಿವರ್ಧಕ ಸಂಘದ ಉಪಾಧ್ಯಕ್ಷ ಹಬೀಬ್, ಕಾರ್ಯದರ್ಶಿ ಇಬ್ರಾಹಿಂ, ಪ್ರಾಂಶುಪಾಲೆ ರಶ್ಮಿತಾ ಸುರೇಶ್, ಆಂಗ್ಲ ಮಾಧ್ಯಮ ಶಾಲಾ ಮುಖ್ಯಶಿಕ್ಷಕಿ ಶಾರಿಕಾ ವೇದಿಕೆಯಲ್ಲಿದ್ದರು.

ಬೂಡ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ, ಬಂಟ್ವಾಳ ಬಿಜೆಪಿ ಅಧ್ಯಕ್ಷ

ದೇವಪ್ಪ ಪೂಜಾರಿ, ಜಿ.ಪಂ.ಮಾಜಿ ಸದಸ್ಯರಾದ ರವೀಂದ್ರ ಕಂಬಳಿ, ಕಮಲಾಕ್ಷಿ ಕೆ.ಪೂಜಾರಿ, ಮಾಣಿ ಗ್ರಾ.ಪಂ.ಸದಸ್ಯೆ ಸುಜಾತ, ನೇರಳಕಟ್ಟೆ ಸಿಎ ಬ್ಯಾಂಕ್ ಅಧ್ಯಕ್ಷ ಪುಷ್ಪರಾಜ್ ಚೌಟ, ಪ್ರಮುಖರಾದ ರಮನಾಥ ರಾಯಿ, ಗಣೇಶ್ ರೈ ಮಾಣಿ, ನಂದರಾಮ ರೈ, ಸನತ್‌ಕುಮಾರ್ ರೈ, ತನಿಯಪ್ಪ ಗೌಡ, ಮೋಹನ್ ಪಿ.ಎಸ್., ಶಾಲಾ ವಿದ್ಯಾಭಿವರ್ಧಕ ಸಂಘದ ಸದಸ್ಯರಾದ ಬಾಲಕೃಷ್ಣ ಶೆಟ್ಟಿ, ವನಿತಾ ಮೊದಲಾದವರು ಉಪಸ್ಥಿತರಿದ್ದರು.

ಸಂಘದ ಸದಸ್ಯ ಕೆ.ಎನ್.ಗಂಗಾಧರ ಆಳ್ವ ಅಭಿನಂದನಾ ಭಾಷಣ ಮಾಡಿದರು. ವಿದ್ಯಾಭಿವರ್ಧಕ ಸಂಘದ ಅಧ್ಯಕ್ಷ ಕಿರಣ್ ಹೆಗ್ಡೆ ಸ್ವಾಗತಿಸಿದರು. ಪ್ರೌಢಶಾಲಾ ಮುಖ್ಯಶಿಕ್ಷಕಿ ಬಿ.ಕೆ.ಭಂಡಾರಿ ವಂದಿಸಿದರು. ಶಿಕ್ಷಕ ಜಯರಾಮ ಕಾರ್ಯಕ್ರಮ ನಿರ್ವಹಿಸಿದರು.



Leave a Comment