Coastal Bulletin

ಬಂಟ್ವಾಳ : ಕರ್ನಾಟಕ ಸ್ಟೇಟ್ ಟೈಲರ್ಸ್ ಎಸೋಸಿಯೇಶನ್ (ರಿ) ಇದರ 24 ನೇ ವರ್ಷದ ಸಂಸ್ಥಾಪನಾ ದಿನಾಚರಣೆಯ ಪ್ರಯುಕ್ತ ಟೈಲರ್ಸ್ ಡೇ ಕಾರ್ಯಕ್ರಮವು ಮಾರ್ಚ್ 7ರಂದು ಮಂಗಳವಾರ ನಡೆಯಲಿದೆ.

ಈ ಕಾರ್ಯಕ್ರಮವು ಮಂಗಳೂರಿನ ಪುರಭವನದ ಟೌನ್ ಹಾಲ್ ನಲ್ಲಿ ಬೆಳಗ್ಗೆ 10 ಗಂಟೆಗೆ ಜರಗಲಿದೆ.

ಈ ಕಾರ್ಯಕ್ರಮದಲ್ಲಿ ಅಶಕ್ತ ವೃತ್ತಿ ಬಾಂಧವರಿಗೆ ಸಹಾಯಧನ, ಹಿರಿಯ ವೃತ್ತಿ ಬಾಂಧವರಿಗೆ ಸನ್ಮಾನ

ಹಾಗೂ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಸಿಗಲಿದೆ.ಬಂಟ್ವಾಳ ಕ್ಷೇತ್ರದ ವ್ಯಾಪ್ತಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಿ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಬೇಕೆಂದು ಬಂಟ್ವಾಳ ಘಟಕದ ಅಧ್ಯಕ್ಷರಾದ ನಾಗೇಶ್ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Leave a Comment