ಮಂಗಳೂರು: ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಮಾ 4ರಂದು ದಕ್ಷಿಣ ಕನ್ನಡ ಕ್ಷೇತ್ರದ ಬಿಜೆಪಿಯ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅವರು ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಾಮಪತ್ರ ಸಲ್ಲಿಸಿದರು. ನಾಮಪತ್ರವನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಸ್ವೀಕರಿಸಿದರು.
ಪೂರ್ವಭಾವಿಯಾಗಿ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಅವರು ಪೂಜೆ ಸಲ್ಲಿಸಿದರು. ಬಳಿಕ ಬಂಟ್ಸ್ ಹಾಸ್ಟೆಲ್ ನ ಬಿಜೆಪಿ ಚುನಾವಣಾ ಕಚೇರಿಯಿಂದ ಮಂಗಳೂರು ಪುರಭವನವರೆಗೆ ಮೆರವಣಿಗೆ ಸಾಗಿಬಂತು. ಸಾವಿರಾರು ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
ಪುರಭವನದ ಹೊರಭಾಗದಲ್ಲಿ ಬಿಜೆಪಿ ಪ್ರಚಾರ
ಸಮಾವೇಶ ನಡೆಯಿತು.ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸಂಸದ ನಳಿನ್ ಕುಮಾರ್ ಕಟೀಲು, ಬಿಜೆಪಿ ಮುಖಂಡರಾದ ಸಿ.ಟಿ.ರವಿ, ವಿ.ಸುನಿಲ್ ಕುಮಾರ್, ಕೋಟ ಶ್ರೀನಿವಾಸ ಪೂಜಾರಿ, ಜೆಡಿಎಸ್ ಜಿಲ್ಲಾಧ್ಯಕ್ಷ ಜಾಕೇ ಮಾಧವ ಗೌಡ ಮೊದಲಾದವರು ಜೊತೆಗಿದ್ದರು.









