Coastal Bulletin

ಬಂಟ್ವಾಳ: ಬಿ.ಸಿ.ರೋಡಿನ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಮಂಗಳವಾರ ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಬಸವ ಜಯಂತಿಯನ್ನು ಆಚರಿಸಲಾಯಿತು.

ಉಪತಹಶೀಲ್ದಾರ್ ರಾಜೇಶ್ ನಾಯ್ಕ್ ಅವರು ಕಾರ್ಯಕ್ರಮ ಉದ್ಘಾಟಿಸಿ,ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ,ಬಸವಣ್ಣನವರು 12 ನೇ ಶತಮಾನದ ಸಾಮಾಜಿಕ ಕ್ರಾಂತಿಯ ಹರಿಕಾರ,

ಅವರು ಸಾಮಾಜಿಕ ತಾರತಮ್ಯ,ಲಿಂಗ ತಾರತಮ್ಯ, ಮೂಡನಂಬಿಕೆಗಳ ವಿರುದ್ಧ ಹೋರಾಡಿ ಜನರನ್ನು ಜಾಗೃತಗೊಳಿಸುವ ಕೆಲಸ ಮಾಡಿದರು.ಬಸವಣ್ಣನವರು ತಮ್ಮ

ವಚನಗಳ ಮೂಲಕ ಸಾಮಾಜಿಕ ಅರಿವನ್ನು ಹರಡಿದರು ಎಂದು ಹೇಳಿದರು.

ತಾಲೂಕು ಪಂಚಾಯತ್ ವ್ಯವಸ್ಥಾಪಕಿ ಶಾಂಭವಿ ತಾಲೂಕು ಕಚೇರಿ ಸಿಬ್ಬಂದಿಗಳು, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು.

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್ ಸ್ವಾಗತಿಸಿ ವಂದಿಸಿದರು. 

Leave a Comment