ಬ್ರಹ್ಮರಕೂಟ್ಲು: ಉಚಿತ ಪುಸ್ತಕ ವಿತರಣೆ ಹಾಗೂ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭೋತ್ಸವ.

Coastal Bulletin
ಬ್ರಹ್ಮರಕೂಟ್ಲು: ಉಚಿತ ಪುಸ್ತಕ ವಿತರಣೆ ಹಾಗೂ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭೋತ್ಸವ.

ಬಂಟ್ವಾಳ :ದ. ಕ.ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಬ್ರಹ್ಮರಕೂಟ್ಲು ಇಲ್ಲಿ ಕಳ್ಳಿಗೆ ಗ್ರಾಮಾಭಿವೃದ್ಧಿ ಸಂಘದ ವತಿಯಿಂದ ಉಚಿತ ಬರವಣಿಗೆ ಪುಸ್ತಕ ವಿತರಣೆ ಹಾಗೂ ಒಂದನೇ ತರಗತಿ ಆಂಗ್ಲ ಮಾಧ್ಯಮ ಶಿಕ್ಷಣವನ್ನು ಆರಂಭಿಸುವ ಕಾರ್ಯಕ್ರಮವು ಇತ್ತೀಚಿಗೆ ನಡೆಯಿತು.

ಕಳ್ಳಿಗೆ ಗ್ರಾಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಉಸ್ತುವಾರಿ ಸಚಿವರಾದ ಬಿ. ರಮಾನಾಥ ರೈ ಒಂದನೇ ತರಗತಿಯಿಂದ ಆಂಗ್ಲ ಮಾಧ್ಯಮದ ಜೊತೆಗೆ ಉಚಿತ ಬರವಣಿಗೆ ಪುಸ್ತಕ ವಿತರಣಾ ಸಮಾರಂಭವನ್ನು ಉದ್ಘಾಟಿಸಿದರು.

ನಂತರ ಮಾತನಾಡಿ ಸರಕಾರಿ ಶಾಲೆಗಳು ಅಭಿವೃದ್ಧಿ ಹೊಂದಲು ಪೋಷಕರ ಸಹಕಾರ ಅತಿ ಅಗತ್ಯ. ಒಂದನೇ ತರಗತಿಯಿಂದ ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣವು ಆರಂಭ ಆಗಿರುವುದು ಬಡವರ ಪಾಲಿಗೆ ಆಶಾಕಿರಣವಾಗಿದೆ ಎಂದು ಹೇಳಿದರು.

ಸಮಾರಂಭದ ಅಧ್ಯಕ್ಷತೆಯನ್ನು ಎಸ್ಡಿಎಂಸಿ ಅಧ್ಯಕ್ಷ ಉದಯ್ ಕುಮಾರ್ ಜ್ಯೋತಿಗುಡ್ಡೆ ವಹಿಸಿ, ಸರಕಾರಿ ಶಾಲೆ, ಉಳಿಯಬೇಕು ಬೆಳೆಯಬೇಕು ಈ ನಿಟ್ಟಿನಲ್ಲಿ ನಾವೆಲ್ಲರೂ ಸಹಕರಿಸಬೇಕು ಎಂದು ಹೇಳಿದರು. 

ಈ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶಾಲಾ ದತ್ತು ಸ್ವೀಕಾರ ಸಮಿತಿಯ

ಸಂಚಾಲಕರು ಹಾಗೂ ಜಿಲ್ಲಾ ಪಂಚಾಯಿತಿನ ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಮಾತನಾಡಿ ಎಲ್ಲರೂ ಒಗ್ಗಟ್ಟಿನಿಂದ ಶಾಲಾ ಅಭಿವೃದ್ಧಿಗೆ ಕೈಜೋಡಿಸ ಬೇಕೆಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಕಮಲಾಕ್ಷ ಬೊಳ್ಳುಕಲ್ಲು ,ಕಳ್ಳಿಗೆ ಗ್ರಾಮಭಿವೃದ್ಧಿ ಸಂಘ ಹಾಗೂ ಶಾಲಾ ದತ್ತು ಸ್ವೀಕಾರ ಸಮಿತಿ ಅಧ್ಯಕ್ಷ ಮಧುಸೂಧನ್ ಶೆಣೈ, ಕಳ್ಳಿಗೆ ಗ್ರಾ. ಪ.ಸದಸ್ಯ ರವಿರಾಜ್ ಜೈನ್, ಗ್ರಾಮಾಭಿವೃದ್ಧಿ ಸಂಘದ ಕಾರ್ಯದರ್ಶಿ ಮನೋಜ್ ಕನಪಾಡಿ ಹಾಗೂ ಶಾಲಾ ಎಸ್ಟಿಎಂಸಿ ಸದಸ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಹಾಗೂ ಮುಖ್ಯ ಶಿಕ್ಷಕಿ ಕಲ್ಯಾಣಿ.ಜಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿ ವಿದ್ಯಾರ್ಥಿಗಳಿಗೆ ಬರವಣಿಗೆ ಪುಸ್ತಕ ವಿತರಿಸಿದರು.

ಸಹ ಶಿಕ್ಷಕಿ ಪ್ಲೇ ವಿ ಪ್ರೀತಿ ಫೆರ್ನಾಂಡಿಸ್ ಧನ್ಯವಾದವಿತ್ತು, ಸಹ ಶಿಕ್ಷಕಿ ಮಂಜುಳಾ. ಡಿ .ಕಾರ್ಯಕ್ರಮ ನಿರೂಪಿಸಿದರು

Leave a Comment