Coastal Bulletin

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಅವಕಾಶವಿಲ್ಲ ಎಂದು ಮಂಗಳೂರಿನಲ್ಲಿ ಎಡಿಪಿಜಿ‌ ಅಲೋಕ್ ಕುಮಾರ್ ಹೇಳಿದ್ದಾರೆ.

ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಗೆ ಅನ್ವಯವಾಗಲಿದೆ. 18 ವರ್ಷದ ಕೆಳಗಿನ‌ ಮಕ್ಕಳು, ಹಿರಿಯ ನಾಗರಿಕರು ಮತ್ತು ಮಹಿಳೆಯರಿಗೆ ಇದರಲ್ಲಿ ವಿನಾಯಿತಿ

ನೀಡಲಾಗಿದೆ. ಒಂದು ವಾರ ಈ ನಿಯಮ ಜಿಲ್ಲೆಯಲ್ಲಿ ಅನುಷ್ಠಾನ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.ಜಿಲ್ಲೆಯಲ್ಲಿ ಕೋಮು ಗಲಭೆಯನ್ನು ಹತ್ತಿಕ್ಕಲು ಅಧಿಕಾರಿಗಳ ಶತ ಪ್ರಯತ್ನ ಮಾಡುತ್ತಿವೆ.

Leave a Comment