Coastal Bulletin

ಬಂಟ್ವಾಳ: ಇಲ್ಲಿನ ಪುರಾಣ ಪ್ರಸಿದ್ಧ ಮಹತೊಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಚಪ್ಪಲಿ ಧರಿಸಿ ಅಕ್ರಮ ಪ್ರವೇಶ ಮಾಡಿ ಅಂಗಣದ ಒಳಗೆ ವಿಕೃತಿ ಮೆರೆದ ವೀಡಿಯೋ ವೈರಲ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪುಂಜಾಲಕಟ್ಟೆ ಠಾಣೆ ಎಸೈ ಸೌಮ್ಯಾ ಜೆ. ನೇತೃತ್ವದ ಪೋಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಉಳ್ಳಾಲ ಮಾಸ್ತಿಕಟ್ಟೆ ನಿವಾಸಿ ಯು.ಕೆ. ಬಶೀರ್ ಎಂಬವರ ಮಗ ಬುಶೇರ್ ರೆಹಮಾನ (20), ಉಳ್ಳಾಲ ಮುಕ್ಕಚ್ಚೇರಿ ನಿವಾಸಿ ಅಬ್ದುಲ್ ಖಾದರ್ ಎಂಬವರ ಮಗ ಇಸ್ಮಾಯಿಲ್ ಅರ್ಹ ಮಾಜ್(22), ಉಳ್ಳಾಲ ಹಳೆಕೋಟೆ ನಿವಾಸಿ ಉಮ್ಮರ್ ಫಾರೂಕ್ ಎಂಬವರ ಮಗ ಮಹಮ್ಮದ್ ತಾನಿಶ್ (19) ಮತ್ತು ಪೆರ್ಮನ್ನೂರು ತನ್ವೀರ್ ಕ್ವಾಟೇಜ್ ಬಬ್ಬುಕಟ್ಟೆ ನಿವಾಸಿ ಬದ್ರುದ್ದೀನ್ ಎಂಬವರ ಮಗ ಮೊಹಮ್ಮದ್

ರಶಾದ್(19) ಬಂಧಿತ ಆರೋಪಿಗಳು.ಈ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳು ಪೊಲೀಸರು ನಡೆಸಿದ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾರೆ. ಇವರನ್ನು ನ್ಯಾಯಾಧೀಶರ ಎದುರು ಗುರುವಾರ ಹಾಜರುಪಡಿಸಲಾಗಿದ್ದು, ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಉಳಿದಂತೆ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. 

ಈಗಾಗಲೇ ಆರೋಪಿಗಳ ಬಂಧನಕ್ಕೆ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಮತ್ತು ಇಲ್ಲಿನ ಹಿಂದೂ ಜಾಗರಣ ವೇದಿಕೆ ಆಗ್ರಹಿಸಿ ಗಡುವು ವಿಧಿಸಿದ್ದರು. 

Leave a Comment