ಕಡೆಗೋಳಿ :ಯಮಸ್ವರೂಪಿ ಬಸ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲಿಯೇ ಸಾವು, ಮತ್ತೊರ್ವ ಗಂಭೀರ.

Coastal Bulletin
ಕಡೆಗೋಳಿ :ಯಮಸ್ವರೂಪಿ ಬಸ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲಿಯೇ ಸಾವು, ಮತ್ತೊರ್ವ ಗಂಭೀರ.

ಬಂಟ್ವಾಳ: ಮಂಗಳೂರು -ಬಿ ಸಿ ರೋಡ್ ರಾಷ್ಟ್ರೀಯ ಹೆದ್ದಾರಿಯ ಕಡೆಗೋಳಿ ಎಂಬಲ್ಲಿ ಖಾಸಗಿ‌ ಬಸ್ ಬೈಕ್ ಗೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿ ಸಾವನ್ನಪ್ಪಿದ್ದು ಇನ್ನೋರ್ವ ಗಂಭೀರವಾಗಿ ಗಾಯಗೊಂಡು ಘಟನೆ ನ 3 ರಂದು ಭಾನುವಾರ ರಾತ್ರಿ ನಡೆದಿದೆ.

ಕಡೆಗೋಳಿ ನಿವಾಸಿ ಪ್ರವೀಣ (30) ಸ್ಥಳದಲ್ಲಿಯೇ ಮೃತಪಟ್ಟ ವ್ಯಕ್ಯಿಯಾಗಿದ್ದು, ಸ್ನೇಹಿತ ಸಂದೀಪ ಗಂಭೀರವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಇಬ್ಬರು ಸೇಲ್ಸ್ ಮ್ಯಾನ್ ಕೆಲಸಗಾರರಾಗಿದ್ದು, ತನ್ನ ಖಾಸಗಿ ಕೆಲಸವನ್ನು ಮುಗಿಸಿ ಮನೆಗೆ ಜೊತೆಯಾಗಿ ಪ್ರಯಾಣಿಸುತ್ತಿದ್ದ ವೇಳೆ ಯಮಸ್ವರೂಪಿ ಬಸ್ ಡಿಕ್ಕಿಯಾಗಿದೆ. ಡಿಕ್ಕಿ ಹೊಡೆದು ಅಮಾಯಕ ಯುವಕನ‌ ಬಲಿತೆಗೆದುಕೊಂಡ ಸೆಲಿನ ಬಸ್ ನ‌ ಚಾಲಕ ಬಸ್ ನಿಂದ ಇಳಿದು ಪರಾರಿಯಾಗಿದ್ಧಾನೆ.

ರಾಷ್ಟ್ರೀಯ ಹೆದ್ದಾರಿ ಮಂಗಳೂರು ‌ಬೆಂಗಳೂರು ರಸ್ತೆಯ ತುಂಬೆ ಸಮೀಪದ ‌ಕಡೆಗೋಳಿ

ಎಂಬಲ್ಲಿ ಮಂಗಳೂರಿನಿಂದ ಬಿಸಿರೋಡಿನ ಕಡೆಗೆ ಬರುತ್ತಿದ್ದ ಸೆಲಿನ ಖಾಸಗಿ ಬಸ್ ಬೈಕ್ ಸವಾರರಿಬ್ಬರಿಗೆ ಡಿಕ್ಕಿಯಾಗಿದೆ.

ಖಾಸಗಿ ಬಸ್ ಚಾಲಕನ ಅತಿವೇಗದ ಮತ್ತು ಅಜಾಗರೂಕತೆಯ ಚಾಲನೆಯ ಪರಿಣಾಮ ಯುವಕನನ್ನು ಬಲಿಯಾಗಿದೆ ಎಂದು ಹೇಳಲಾಗಿದ್ದು, ಬಸ್ ಚಾಲಕನ ಮೇಲೆ ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‌‌ಸ್ಥಳಕ್ಕೆ ಟ್ರಾಫಿಕ್ ಎಸ್.ಐ.ಸುತೇಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಖಾಸಗಿ ಬಸ್ ಗಳ ಅತಿವೇಗದ ಮತ್ತು ಅಜಾಗರೂಕತೆಯ ಚಾಲನೆ ಹಲವು ಜೀವಗಳು ಬಲಿಯಾಗಿದ್ದು ಸಾರ್ವಜನಿಕರಿಂದ ವ್ಯಾಪಾಕ ಆಕ್ರೋಶ ವ್ಯಕ್ತವಾಗಿದೆ.

Leave a Comment