Coastal Bulletin

ಬಂಟ್ವಾಳ :ತಾಲ್ಲೂಕಿನ ಬ್ರಹ್ಮರಕೂಟ್ಲು ಶ್ರೀ ಮೂಕಾಂಬಿಕಾ ಕೃಪಾ ಶ್ರೀರಾಮ ಭಜನಾ ಮಂದಿರದಲ್ಲಿ ಸುವರ್ಣ ಮಹೋತ್ಸವ ಪ್ರಯುಕ್ತ ಬುಧವಾರ ನಡೆದ ಭಜನಾ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಒಡಿಯೂರು ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು.

ಹುಟ್ಟು ಮತ್ತು ಬದುಕು ಸಾವುಗಳ ನಡುವಿನ ಅಂತರದಲ್ಲಿ ನಾವು ಮಾಡುವ ಭಜನೆ ಎಂಬ ಪುಣ್ಯ ಗಳಿಕೆ ಜೊತೆಗೆ ಪಾಶ್ಚಾತ್ಯ ಸಂಸ್ಕೃತಿ ಎಂಬ ವಿಕೃತಿಗೆ ತಡೆಯೊಡ್ಡಲು ಸಾಧ್ಯವಿದೆ ಎಂದು ಒಡಿಯೂರು ಕ್ಷೇತ್ರದ ಗುರುದೇವಾನಂದ ಸ್ವಾಮೀಜಿ ಹೇಳಿದ್ದಾರೆ. 

ಇಲ್ಲಿನ ಬ್ರಹ್ಮರಕೂಟ್ಲು ಶ್ರೀ ಮೂಕಾಂಬಿಕಾ ಕೃಪಾ ಶ್ರೀರಾಮ ಭಜನಾ ಮಂದಿರದಲ್ಲಿ ಸುವರ್ಣ ಮಹೋತ್ಸವ ಪ್ರಯುಕ್ತ ಬುಧವಾರ ನಡೆದ ಭಜನಾ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಶುಭ ಹಾರೈಸಿದರು. ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನ

ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜ, ಚಂದ್ರಹಾಸ್ ಶೆಟ್ಟಿ ರಂಗೋಲಿ, ನಾರಾಯಣ ಗುರು ವಿಚಾರ ವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್, ಕಳ್ಳಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಯಶೋಧ ಜಾರಂದಗುಡ್ಡೆ, ಸದಸ್ಯರಾದ ಪುರುಷೋತ್ತಮ ಕೊಟ್ಟಾರಿ ಮಾಡಂಗೆ, ಮನೋಜ್ ವಳವೂರು, ರತ್ನಾ ದೇವಂದಬೆಟ್ಟು, ಮಂದಿರ ಆಡಳಿತ ಸಮಿತಿ ಅಧ್ಯಕ್ಷ ಶಶಿಧರ್ ಬ್ರಹ್ಮರಕೂಟ್ಲು, ವೇಣುಗೋಪಾಲ ಶೆಟ್ಟಿ ಕುಪ್ಪಿಲಗುತ್ತು, ಉತ್ಸವ ಸಮಿತಿ ಅಧ್ಯಕ್ಷ ರೋಶನ್ ರೈ ಪಚ್ಚಿನಡ್ಕ, ಉಮೇಶ್ ರೆಂಜೋಡಿ, ಗೋಪಾಲ್ ಗೋವಿಂತೋಟ, ಮಾಧವ ವಳವೂರು ಮತ್ತಿತರರು ಇದ್ದರು.

Leave a Comment