ಬಂಟ್ವಾಳ: ಬಿ.ಸಿ.ರೋಡಿಗೆ ಸಮೀಪದ ಮೊಡಂಕಾಪು ಇನ್ವೆಂಟ್ ಜೀಸಸ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಹಿರಿಯ ವಿದ್ಯಾರ್ಥಿಗಳ ಸಂಘದ ಆಶ್ರಯದಲ್ಲಿ "ಹಿರಿಯ ವಿದ್ಯಾರ್ಥಿಗಳ ಸಮಾಗಮ" ಕಾರ್ಯಕ್ರಮ ಶಾಲಾ ಸಭಾಂಗಣದಲ್ಲಿ ನಡೆಯಿತು.
ಖ್ಯಾತ ವೈದ್ಯರು,ಶಾಲೆಯ ಹಳೇ ವಿದ್ಯಾರ್ಥಿಯಾದ ಡಾ. ಶ್ರೀನಿವಾಸ ಕಕ್ಕಿಲ್ಲಾಯ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು. ಶಾಲಾ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಸದಾಶಿವ ಬಂಗೇರ ಸಭಾಧ್ಯಕ್ಷತೆ ವಹಿಸಿದ್ದರು.
ಮೊಡಂಕಾಪು ವಿದ್ಯಾಸಂಸ್ಥೆಯ ಸಂಚಾಲಕರಾದ ಅ| ವಂ ಸ್ವಾಮಿ ವಲೇರಿಯನ್ ಡಿಸೋಜ,ಶಿಕ್ಷಣ ಪ್ರೇಮಿ, ಪದ್ಮಶ್ರೀ ಪುರಸ್ಕೃತರಾದ ಹರೇಕಳ ಹಾಜಬ್ಬ,ಬೆಳಗಾವಿ ವಿಭಾಗದ ಕ ಪ್ರಾತಿ.ಪ.ಮಂ,ನ ಸಹ ನಿರ್ದೇಶಕರಾದ
ವಾಲ್ಟರ್ ಡಿ'ಮೆಲ್ಲೊ, ಬಂಟ್ವಾಳ ಪುರಸಭಾ ಸದಸ್ಯ ಲೋಲಾಕ್ಷ ಶೆಟ್ಟಿ ಮೊಡಂಕಾಪು, ಶಿಕ್ಷಕ-ರಕ್ಷಕ ಸಂಘ ಅಧ್ಯಕ್ಷ ರೋಶನ್ ಡಿ'ಸೋಜ,ಶಾಲಾ ಮುಖ್ಯ ಶಿಕ್ಷಕಿ ಟೀಜಾ ಡಿ'ಮೆಲ್ಲೊ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಇದೇ ವೇಳೆ ಈ ಶಾಲೆಯಲ್ಲಿ ಸೇವೆ ಸಲ್ಲಿಸಿದ ಶಿಕ್ಷಕರನ್ನು ಗೌರವಿಸಲಾಯಿತು. ಕಾರ್ಯಕ್ರಮದ ಬಳಿಕ ಒಂದು ಕಿರುನಾಟಕವನ್ನು ಹಿರಿಯ ವಿದ್ಯಾರ್ಥಿಗಳು ಪ್ರದರ್ಶಿಸಿದರು.















