ಶಂಭೂರು :ಸರ್ಕಾರಿ ಪ್ರೌಢಶಾಲೆಯಲ್ಲಿ ಟ್ಯೂಶನ್ ಕ್ಲಾಸ್ ಉದ್ಘಾಟನಾ ಸಮಾರಂಭ.

Coastal Bulletin
ಶಂಭೂರು :ಸರ್ಕಾರಿ ಪ್ರೌಢಶಾಲೆಯಲ್ಲಿ ಟ್ಯೂಶನ್ ಕ್ಲಾಸ್ ಉದ್ಘಾಟನಾ ಸಮಾರಂಭ.

ಬಂಟ್ವಾಳ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್( ರಿ) ಬಂಟ್ವಾಳ ತಾಲೂಕು. ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಟ್ಯೂಶನ್ ಕ್ಲಾಸ್ ಉದ್ಘಾಟನಾ ಕಾರ್ಯಕ್ರಮ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಬೊಂಡಲ ಜಗನ್ನಾಥ ಶೆಟ್ಟಿ ಸ್ಮಾರಕ ಸರ್ಕಾರಿ ಪ್ರೌಢಶಾಲೆ ಶಂಭೂರಿನಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಂಭೂರಿನ ಪ್ರಗತಿ ಬಂದು ಸ್ವ ಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಕೃಷ್ಣಪ್ಪನಾಯಕ ವಹಿಸಿದರು. ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಮಾಧವ ಗೌಡ ಕಾರ್ಯಕ್ರಮದ ಬಗ್ಗೆ ಹಾಗೂ ಯೋಜನೆಯಲ್ಲಿ ಶಿಕ್ಷಣಕ್ಕೆ ಸಿಗುವಂತ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.


ವೇದಿಕೆಯಲ್ಲಿ ಜನಜಾಗೃತಿಯ ಸದಸ್ಯ ಪುರುಷೋತ್ತಮ ನಾಟಿ, ಅತಿಥಿ ಶಿಕ್ಷಕಿ

ಕುಮಾರಿ ಹರ್ಷ ಹಾಗೂ ಪ್ರಿಯ, ಜ್ಞಾನವಿಕಾಸ ಸಮನ್ವಯ ಅಧಿಕಾರಿ ಕಮಲಾಕ್ಷಿ ಉಪಸಿತರಿದ್ದರು. 


ಮೂರು ತಿಂಗಳು ಟ್ಯೂಷನ್ ಕ್ಲಾಸ್ ನಡೆಯಲಿದ್ದು ಸುಮಾರು 45 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಶಾಲಾ ವಿದ್ಯಾರ್ಥಿ ತಕ್ಷಿತ್ ಪ್ರಾರ್ಥಿಸಿ, ಸೇವಾ ಪ್ರತಿನಿಧಿ ಲಕ್ಷ್ಮಿ ಸ್ವಾಗತಿಸಿ, ಶಾಲಾ ಮುಖ್ಯೋಪಾಧ್ಯಾಯ ಕಮಲಾಕ್ಷರ ವಂದಿಸಿ, ವಲಯ ಮೇಲ್ವಿಚಾರಕಿ ಅಮಿತಾ ನಿರೂಪಿಸಿದರು

Leave a Comment