ಬಂಟ್ವಾಳ:ಕ್ಯಾಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ (ನಿ.) ಇದರ ಆಡಳಿತ ಮಂಡಳಿಗೆ ಸದಸ್ಯರ ಆಯ್ಕೆ.

Coastal Bulletin
ಬಂಟ್ವಾಳ:ಕ್ಯಾಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ (ನಿ.) ಇದರ ಆಡಳಿತ ಮಂಡಳಿಗೆ ಸದಸ್ಯರ ಆಯ್ಕೆ.

ಬಂಟ್ವಾಳ ಕ್ಯಾಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ (ನಿ.) ಇದರ ಆಡಳಿತ ಮಂಡಳಿಗೆ 18ರಂದು ಶನಿವಾರ ಸಾಮಾನ್ಯ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮುಂದಿನ ಐದು ವರ್ಷಗಳ (2025-30) ಅವಧಿಗೆ 14 ಅಭ್ಯರ್ಥಿಗಳಲ್ಲಿ 11 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ಬಿ.ಸಿ. ರೋಡ್ ನಲ್ಲಿರುವ ಲಯನ್ಸ್ ಕ್ಲಬ್ ನಲ್ಲಿ ಮತದಾನ ನಡೆದಿದ್ದು, ಮಂಗಳೂರು ಸಹಕಾರಿ ಸಂಘಗಳ ಉಪ ನಿಬಂಧಕರ ಕಚೇರಿಯ ಬಂಟ್ವಾಳ ಸಹಕಾರಿ ಅಭಿವೃದ್ದಿ ಅಧಿಕಾರಿ ಡಾ. ಜ್ಯೋತಿ ಡಿ. ಚುನಾವಣಾಧಿಕಾರಿಯಾಗಿದ್ದು, ಚುನಾವಣಾ ಪ್ರಕ್ರಿಯೆ ನಡೆಸಿದರು. ಬಂಟ್ವಾಳ ಕ್ಯಾಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ (ನಿ.) ಇದರ ಸಿ ಇ ಒ ಸೆಲಿನ್ ಗ್ರೇಸಿ ಡಿಸೋಜ ಹಾಗೂ ಸಿಬ್ಬಂದಿಗಳು ಸಹಕರಿಸಿದರು.

ಸಾಮಾನ್ಯ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸಂಘದ ಹಾಲಿ ಅಧ್ಯಕ್ಷ ಜೀವನ್ ಲೋಯ್ಡ್ ಪಿಂಟೋ, ಉಪಾಧ್ಯಕ್ಷ

ವಲೇರಿಯನ್ ಬರೆಟ್ಟೊ, ಅನಿಲ್ ಹೆರಾಲ್ಡ್ ಫ್ರಾಂಕ್, ಲಾದ್ರು ಮಿನೇಜಸ್, ರೊನಾಲ್ಡ್ ವಿಜಯ್ ಫೆರ್ನಾಂಡಿಸ್, ಗ್ಲೋರಿಯಾ ಪ್ರೀಮಾ ಕುಟಿನ್ಹೊ, ವಿನ್ಸೆಂಟ್ ಕ್ಲಾಡಿ ಕಾರ್ಲೋ, ಲಾರೆನ್ಸ್ ಕ್ಲಿಫರ್ಡ್ ಡಿಸೋಜ, ಫ್ರಾನ್ಸಿಸ್ ಮೆಂಡೋನ್ಸಾ, ಹಿಲಾರಿ ಕ್ರಾಸ್ತ, ಹ್ಯೂಬರ್ಟ್ ಲೋಬೊ ಜಯಗಳಿಸಿದ್ದಾರೆ.

ಅನಿತಾ ನೊರೊನ್ಹಾ ಮತ್ತು ಬೆನೆಡಿಕ್ಟಾ ಸಲ್ದಾನ್ಹಾ ಇವರು ಮಹಿಳಾ ಕ್ಷೇತ್ರಕ್ಕೆ ಇಬ್ಬರು ಅಭ್ಯರ್ಥಿಗಳು ಮಾತ್ರ ನಾಮಪತ್ರ ಸಲ್ಲಿಸಿದ್ದು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಹಿಂದುಳಿದ ಪ್ರವರ್ಗ ಬಿ ಕ್ಷೇತ್ರದಿಂದ ವಿಶಾಲ್ ಡಿಸೋಜರವರು ಒಬ್ಬರು ಮಾತ್ರ ನಾಮಪತ್ರ ಸಲ್ಲಿಸಿದ್ದು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.




 

























 

Leave a Comment