ಬಂಟ್ವಾಳ :ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನವೋದಯ ಮಿತ್ರ ಕಲಾ ವೃಂದ (ರಿ.) ಮತ್ತು ನೇತ್ರಾವತಿ ಮಾತೃ ಮಂಡಳಿ, ನೆತ್ತರಕೆರೆ ಇದರ 39ನೇ ವರ್ಷದ ವಾರ್ಷಿಕೋತ್ಸವ ಸಮಾರಂಭವು ಫೆ.07ರಂದು ಶನಿವಾರ ನೆತ್ತರಕೆರೆ ಶಾಲಾ ವಠಾರದಲ್ಲಿ ನಡೆಯಲಿದೆ.
ಅಂದು ಬೆಳಿಗ್ಗೆ 9ರಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮದ್ಯಾಹ್ನ ಮಹಾಪೂಜೆಯ ಬಳಿಕ ಅನ್ನಸಂತರ್ಪಣೆ ನಡೆಯಲಿದೆ.ಸಂಜೆ 7ರಿಂದ ಸಾಂಸ್ಕೃತಿಕ ನೃತ್ಯ ವೈವಿದ್ಯ,ಸಭಾ
ಕಾರ್ಯಕ್ರಮ ನಡೆಯಲಿದೆ, ಬಳಿಕ ಸಂಘದ ಕಲಾವಿದರ ಅಭಿನಯದ "ತಪ್ಪು ಎನ್ಯೂಡ್ಚಿ" ಎಂಬ ತುಳು ಸಾಮಾಜಿಕ ಹಾಸ್ಯಮಯ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಸಂಘದ ಅಧ್ಯಕ್ಷ ಜಗದೀಶ ಎನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.














