ಬಂಟ್ವಾಳ :ಶ್ರೀ ರಕ್ತೇಶ್ವರಿ ಯುವಕ ಸಂಘ (ರಿ) ನೇರಂಬೋಳು ಇದರ 24ನೇ ವಾರ್ಷಿಕೋತ್ಸವ ಸಮಾರಂಭವು ಮಾ.2ರಂದು ಶನಿವಾರ ಸಂಘದ ವಠಾರದಲ್ಲಿ ನಡೆಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಹರೀಶ್ ಕುಲಾಲ್ ವಹಿಸಿದರು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವ ವಾಹಿನಿ ಬಂಟ್ವಾಳ ಘಟಕ ಅಧ್ಯಕ್ಷ ಹರೀಶ್ ಕೋಟ್ಯಾನ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.ಬಂಟ್ವಾಳ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಚೇತನ್ ರಾಜ್, ಉದ್ಯಮಿ ಶ್ರೀ ಎಂಟರ್ಪ್ರೈಸಸ್ ನ ಕಿರಣ್ ಅಟ್ಲೂರು ಅತಿಥಿಗಳಾಗಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ನಾಟಿವೈದ್ಯ ಈಶ್ವರ ಪೂಜಾರಿ ಕಲಾಯಿ ಯವರನ್ನು ಸನ್ಮಾನಿಸಲಾಯಿತು
ಹಾಗೂ 2022 23ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಸ್ಥಳೀಯ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಗೌರವಾಧ್ಯಕ್ಷ ಮನೋಹರ್ ನೆರಂಬೋಳು ಸ್ವಾಗತಿಸಿ,ಸಂಘವು ನಡೆದು ಬಂದ ದಾರಿಯ ಬಗ್ಗೆ ಪ್ರಾಸ್ತವಿಕವಾಗಿ ಮಾತನಾಡಿ, ಮುಂದಿನ ವರುಷ ಸಂಘದ 25ನೇ ಬೆಳ್ಳಿಹಬ್ಬದ ಕಾರ್ಯಕ್ರಮಗಳ ರೂಪುರೇಷೆ ಬಗ್ಗೆ ಮಾಹಿತಿ ನೀಡಿದರು.ನವೀನ್ ಪೂಜಾರಿ ಧನ್ಯವಾದವಿತ್ತು,ರವೀಂದ್ರ ಮೂಲ್ಯ ಕಾರ್ಯಕ್ರಮ ನಿರೂಪಿಸಿದರು.









