ಮಾ.7 ನಾಳೆ ಬಂಟ್ವಾಳ ಕಂಬಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ

Coastal Bulletin
ಮಾ.7 ನಾಳೆ ಬಂಟ್ವಾಳ ಕಂಬಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ

ಬಂಟ್ವಾಳ :ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾ.7ರಂದು ದ.ಕ. ಜಿಲ್ಲೆಗೆ ಆಗಮಿಸಿ ನೇರವಾಗಿ ಬಂಟ್ವಾಳದ ನಾವೂರು ಗ್ರಾಮದ ಕೂಡಿಬೈಲಿನಲ್ಲಿ ನಡೆಯಲಿರುವ ಮೂಡೂರು-ಪಡೂರು ಬಂಟ್ವಾಳ ಕಂಬಳಕ್ಕೆ ಸಂಜೆ 6.30 ಗಂಟೆಗೆ ಆಗಮಿಸಲಿದ್ದಾರೆ ಎಂದು ಕಂಬಳದ ನೇತೃತ್ವ ವಹಿಸಿರುವ ಮಾಜಿ ಸಚಿವ ಬಿ. ರಮಾನಾಥ ರೈ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಪ್ರತಿಷ್ಠಿತ ಬಂಟ್ವಾಳ ಕಂಬಳದ ಸರ್ವ ಸಿದ್ಧತೆಗಳು ಪೂರ್ಣಗೊಂಡಿದ್ದು, ಅದ್ದೂರಿಯಾಗಿ 2 ದಿನ ಕಂಬಳೋತ್ಸವ ನಡೆಯಲಿರುವ ಸಂದರ್ಭದಲ್ಲಿ ಮುಖ್ಯಮಂತ್ರಿ ಭಾಗಿಯಾಗುವ ಹಿನ್ನಲೆಯಲ್ಲಿ ಭದ್ರತೆಯ ದೃಷ್ಟಿಯಿಂದ ಸಕಲ ರೀತಿಯ ಸಹಕಾರವನ್ನು ಸಂಬಂಧ ಪಟ್ಟ ಇಲಾಖೆಗೆ ನೀಡಿದ್ದು, ಸಾರ್ವಜನಿಕರಿಗೆ ಯಾವುದೇ ಸಮಸ್ಯೆಯಾಗದಂತೆ ಎಲ್ಲಾ ಕ್ರಮ ಕೈಗೊಳ್ಳಲಾಗಿದೆ , ಇದು ನಮ್ಮ ನಿಮ್ಮೆಲ್ಲರ ಕಂಬಳವಾಗಿದ್ದು, ಎಲ್ಲರೂ ಭಾಗವಹಿಸಿ

ಕಂಬಳ ವನ್ನು ಯಶಸ್ವಿಗೊಳಿಸಬೇಕಾಗಿ ವಿನಂತಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಕಂಬಳ ಸಮಿತಿಯ ಅಧ್ಯಕ್ಷ ಪಿಯೂಸ್ ಎಲ್ ರೋಡ್ರಿಗಸ್, ಕಾರ್ಯಾಧ್ಯಕ್ಷ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಉಪಾಧ್ಯಕ್ಷ ಬೇಬಿ ಕುಂದರ್,  ಸಂಚಾಲಕ ಬಿ ಪದ್ಮಶೇಖ‌ರ್ ಜೈನ್, ಗೌರವ ಸಲಹೆಗಾರ ಕೆ ಪದ್ಮನಾಭ ರೈ ಕಲ್ಲಡ್ಕ, ಬಿ ಎಂ ಅಬ್ಬಾಸ್ ಅಲಿ, ಬಾಲಕೃಷ್ಣ ಅಂಚನ್‌, ಪ್ರಚಾರ ಸಮಿತಿ ಸಂಚಾಲಕ ಸಿದ್ದೀಕ್ ಗುಡ್ಡೆಅಂಗಡಿ ಮತ್ತಿತರರು ಉಪಸ್ಥಿತರಿದ್ದರು 

Leave a Comment