Coastal Bulletin

ಬಂಟ್ವಾಳ: ಇಲ್ಲಿನ ಬಿ.ಸಿ.ರೋಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಇದೇ 6ರಂದು ಸಂಜೆ 4ಗಂಟೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಯೋಗಿ ಇವರು ಬಿಜೆಪಿ ಅಭ್ಯರ್ಥಿ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಪರವಾಗಿ ರೋಡ್ ಶೋ ನಡೆಸಿ ಮತಯಾಚನೆ ನಡೆಸಲಿದ್ದಾರೆ ಎಂದು ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ ಹೇಳಿದ್ದಾರೆ.

ಬಿ.ಸಿ.ರೋಡು ಬಿಜೆಪಿ ಚುನಾವಣಾ ಕಾರ್ಯಾಲಯದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಇಲ್ಲಿನ 59 ಗ್ರಾಮಗಳಲ್ಲಿ ಒಟ್ಟು 249 ಬೂತ್ ಮಟ್ಟದಿಂದ ತಲಾ 100 ರಂತೆ ಸುಮಾರು 50 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಸಂಸದ ನಳಿನ್ ಕುಮಾರ್ ಕಟೀಲು, ಬಿಜೆಪಿ ಅಭ್ಯಥರ್ಿ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಉಪಸ್ಥಿತಿಯಲ್ಲಿ ರೋಡ್ ಶೋ ನಡೆಯಲಿದ್ದು, ಬಿ.ಸಿ.ರೋಡು ಬಸ್ ನಿಲ್ದಾಣ ಬಳಿ ತೆರೆದ ವಾಹನದಿಂದಲೇ ಯೋಗಿ

ಭಾಷಣ ಮಾಡುವರು. ಅಂದು ಬೆಳಿಗ್ಗೆ 11 ಗಂಟೆಯಿಂದ ಸಂಜೆ ತನಕ ಬಿ.ಸಿ.ರೋಡು ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಳ್ಳಲಿದೆ ಎಂದರು.

ಕಳೆದ ಅವಧಿಗಿಂತ ದುಪ್ಪಟ್ಟು ಮತಗಳಿಂದ ರಾಜೇಶ ನಾಯ್ಕ್ ಗೆಲ್ಲಲಿದ್ದು, ಕಾಂಗ್ರೆಸ್ ಕೀಳು ಮಟ್ಟದ ರಾಜಕೀಯ ಕ್ಕೆ ಇಳಿದಿದೆ. ಬಜರಂಗದಳ ನಿಷೇಧ ಖಂಡನೀಯ ಎಂದರು.

ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಎ.ಗೋವಿಂದ ಪ್ರಭು, ರವೀಶ್ ಶೆಟ್ಟಿ ಕರ್ಕಳ, ಚಿದಾನಂದ ರೈ ಕಕ್ಯಪದವು, ಪುರುಷೋತ್ತಮ ಶೆಟ್ಟಿ, ಹರಿದಾಸ್ ಪಾಲಕ್ಕಾಡ್ ಇದ್ದರು.

Leave a Comment