ಬಂಟ್ವಾಳ :ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಳ್ಳಿಗೆ, ನೆತ್ತರಕೆರೆ ಇಲ್ಲಿಯ ವಿದ್ಯಾರ್ಥಿಗಳಿಗೆ ಪೊಳಲಿ ಶ್ರೀ ರಾಮಕೃಷ್ಣ ತಪೋವನದ ವತಿಯಿಂದ ಕೊಡುಗೆಯಾಗಿ ನೀಡಿದ ಉಚಿತ ನೋಟ್ ಪುಸ್ತಕ ಮತ್ತು ಲೇಖನ ಸಾಮಾಗ್ರಿಗಳ ವಿತರಣಾ ಕಾರ್ಯಕ್ರಮವು ಜೂನ್ 4ರಂದು ಮಂಗಳವಾರ ಶಾಲೆಯಲ್ಲಿ ನಡೆಯಿತು.
ತಪೋವನದ ಶ್ರೀ.ವಿವೇಕ ಚೈತನ್ಯಾನಂದ ಸ್ವಾಮೀಜಿ ಪುಸ್ತಕ ವಿತರಿಸಿ ವಿದ್ಯಾರ್ಥಿಗಳಿಗೆ ಸಂದೇಶವನ್ನು ನೀಡಿದರು. ಈ ಸಂದರ್ಭದಲ್ಲಿ ಶಾಲಾ ಎಸ್. ಡಿ.
ಎಂ ಸಿ ಅಧ್ಯಕ್ಷ ದಾಮೋದರ್ ನೆತ್ತರಕೆರೆ, ಮುಖ್ಯಶಿಕ್ಷಕಿ ಸಿಲ್ವಿಯಾ ಬ್ರೇಗ್ಸ್,ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕಿ ಮೋಹಿನಿ ಕಾರ್ಯಕ್ರಮ ನಿರೂಪಿಸಿದರು.









