ಬಂಟ್ವಾಳ :ತುಂಬೆ ಬಿ ಎ ವಿದ್ಯಾಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆಯು ಮೇ 5ರಂದು ಗುರುವಾರ ವಿಜೃಂಭಣೆಯಿಂದ ಜರುಗಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ತುಂಬೆ ವಿದ್ಯಾಸಂಸ್ಥೆಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಮಲ್ಲಿಕಾ ಶೆಟ್ಟಿಯವರು ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಪರಿಸರಕ್ಕೆ ನಾವು ಮುಖ್ಯವಲ್ಲ ನಮಗೆ ಪರಿಸರ ಮುಖ್ಯ ಎಂಬ ತಾತ್ವಿಕ ಸತ್ಯವನ್ನು ಹೇಳುವ ಮೂಲಕ ಕಾರ್ಯಕ್ರಮಕ್ಕೆ ಶುಭಕೋರಿದರು.
ಕಾರ್ಯಕ್ರಮದಲ್ಲಿ ಕನ್ನಡ ಮಾಧ್ಯಮ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಜಗದೀಶ್ ರೈ ಬಿ., ಸಮಾಜ ವಿಜ್ಞಾನ ಶಿಕ್ಷಕಿ ಸೌಮ್ಯ, ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕಿ ಶ್ರೀಮತಿ
ಜ್ಯೋತ್ಸ್ನಾ ವಿದ್ಯಾಸಂಸ್ಥೆಯ ಪ್ರಾಥಮಿಕ ವಿಭಾಗದ ದೈಹಿಕ ಶಿಕ್ಷಣ ಶಿಕ್ಷಕಿಯವರಾದ ಮೋಲಿ ಎಡ್ನ ಗೋನ್ಸಾಲ್ವಿಸ್, ಸುಕೇತಾ ಹಾಗೂ ಶ್ವೇತಾ ಇವರ ನೇತೃತ್ವದಲ್ಲಿ ನಮ್ಮ ವಿದ್ಯಾಸಂಸ್ಥೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕಚೇರಿ ಸಹಾಯಕ ಅಶೋಕ್ ಇವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ವಿದ್ಯಾಸಂಸ್ಥೆಯ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿಯರ ಪರಿಸರ ಗೀತೆಯೊಂದಿಗೆ ಕಾರ್ಯಕ್ರಮಕ್ಕೆ ವಿಧ್ಯುಕ್ತವಾದ ಚಾಲನೆ ದೊರೆಯಿತು. ಕನ್ನಡ ಅಧ್ಯಾಪಕ ರಮೇಶ್ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.














