ಬಂಟ್ವಾಳ: ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ಸಾರ್ವಜನಿಕ ಆಡಳಿತದ ಅಂಗವಾಗಿ ದೇಶಾದ್ಯಂತ ‘ಸೇವಾ ಸಂಕಲ್ಪ ಅಭಿಯಾನ’ ಹಮ್ಮಿಕೊಳ್ಳಲಾಗಿದ್ದು, ಇದರ ಭಾಗವಾಗಿ ಅ.7ರಂದು ಬಂಟ್ವಾಳದ ಬಂಟರ ಸಂಘದಲ್ಲಿ ಜಿಲ್ಲಾ ಮಟ್ಟದ ‘ಸೇವಾ ಜ್ಯೋತಿ’ ಕಾರ್ಯಕ್ರಮ ನಡೆಯಲಿದೆ ಎಂದು ಶಾಸಕ ರಾಜೇಶ್ ನಾಯ್ಕ್ ತಿಳಿಸಿದ್ದಾರೆ.
ಅವರು ಬಿ ಸಿ ರೋಡ್ ಸ್ಪರ್ಶ ಕಲಾ ಮಂದಿರದಲ್ಲಿ ಕರೆದ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿ, ನರೇಂದ್ರ ಮೋದಿ ಅವರು 13 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಹಾಗೂ 12 ವರ್ಷಗಳ ಕಾಲ ಪ್ರಧಾನಮಂತ್ರಿಯಾಗಿ ಸಲ್ಲಿಸಿರುವ ಸೇವೆಯನ್ನು ಸ್ಮರಿಸುವ ಉದ್ದೇಶದಿಂದ ದೇಶಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಇದರ ಅಂಗವಾಗಿ ಬಂಟ್ವಾಳದಲ್ಲೂ ವಿಶೇಷ ಕಾರ್ಯಕ್ರಮ ನಡೆಯಲಿದೆ.
ಅ.7ರಂದು ನಾರಾಯಣ ಗುರು
ವೃತ್ತದಿಂದ ವಾಹನ ಜ್ಯೋತಿ ಕಾರ್ಯಕ್ರಮ ನಡೆಯಲಿದ್ದು, ಬಳಿಕ ಬಂಟರ ಸಂಘದಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ ಆಯೋಜಿಸಲಾಗಿದೆ. ದೇಶದಾದ್ಯಂತ ನಡೆಯುತ್ತಿರುವ ಈ ಅಭಿಯಾನದ ಜಿಲ್ಲಾ ಮಟ್ಟದ ಪ್ರಮುಖ ಕಾರ್ಯಕ್ರಮವೊಂದನ್ನು ಬಂಟ್ವಾಳದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ರಾಜೇಶ್ ನಾಯ್ಕ್ ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ಪ್ರಮುಖರಾದ ಚೆನ್ನಪ್ಪ ಕೋಟ್ಯಾನ್, ಸುದರ್ಶನ್ ಬಜ,ಸುಲೋಚನಾ ಜೆ ಕೆ ಭಟ್, ದಿನೇಶ್ ಅಮ್ಟೂರು,ಶಿವಪ್ರಸಾದ, ಪುರುಷೋತ್ತಮ್ ಶೆಟ್ಟಿ ಉಪಸ್ಥಿತರಿದ್ದರು.











