Coastal Bulletin

ಬಂಟ್ವಾಳ ತಾಲ್ಲೂಕಿನ ಕಾರಣಿಕ ಪ್ರಸಿದ್ಧ ಕಾರಂಬಡೆ ಶ್ರೀ ಮಹಮ್ಮಾಯಿ ಕ್ಷೇತ್ರದಲ್ಲಿ ಭಾನುವಾರ ನಡೆದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ ಕಾರ್ಯಕ್ರಮವನ್ನು ಕನ್ಯಾಡಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಮತ್ತು ಮಾಣಿಲ ಮೋಹನದಾಸ ಪರಮಹಂಸ ಸ್ವಾಮೀಜಿ ಉದ್ಘಾಟಿಸಿದರು

ಜೀವಿತಾವಧಿಯಲ್ಲಿ ಧಾರ್ಮಿಕ ಕ್ಷೇತ್ರಗಳಿಗೆ ವಿವಿಧ ರೀತಿಯಲ್ಲಿ ಕೊಡುಗೆ ಸಲ್ಲಿಸುವ ಮೂಲಕ ಪುಣ್ಯ ಸಂಪಾದನೆ ಮತ್ತು ಸಮೃದ್ಧ ಸಮಾಜ ನಿಮರ್ಾಣಕ್ಕೆ ಸಾಧ್ಯವಾಗುತ್ತದೆ ಎಂದು ಕನ್ಯಾಡಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿದ್ದಾರೆ.

ಇಲ್ಲಿನ ಕಾರಣಿಕ ಪ್ರಸಿದ್ಧ ಕಾರಂಬಡೆ ಶ್ರೀ ಮಹಮ್ಮಾಯಿ ಕ್ಷೇತ್ರದಲ್ಲಿ ಭಾನುವಾರ ನಡೆದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.

ಜ. 21ರಿಂದ 25ರ ತನಕ ನಡೆಯುವ ಬ್ರಹ್ಮಕಲಶೋತ್ಸವ ಮತ್ತು ಪ್ರಸಕ್ತ ನಡೆಯುತ್ತಿರುವ ಕ್ಷೇತ್ರದ ಜೀಣೋದ್ಧಾರ ಕಾರ್ಯದಲ್ಲಿ ಭಕ್ತರು ನಿರಂತರವಾಗಿ ತೊಡಗಿಸಿಕೊಳ್ಳಬೇಕು ಎಂದರು. 

ಮಾಣಿಲ ಶ್ರೀಧಾಮ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿ, 'ಹಿಂದುಳಿದ ಸಮಾಜ ಹಿಂಜರಿಕೆ ಬಿಟ್ಟು ಸತ್ಕಾರ್ಯದಲ್ಲಿ ತೊಡಗಿಸಿಕೊಂಡು ಮುನ್ನಲೆಗೆ ಬರಬೇಕು' ಎಂದರು. 

ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕೆ.ಸೇಸಪ್ಪ ಕೋಟ್ಯಾನ್ ಪಚ್ಚಿನಡ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕ್ಷೇತ್ರದ ಆಡಳಿತ ಮೊಕ್ತೇಸರ ಅರುಣ್ಕುಮಾರ್

ಕಾರಂಬಡೆ, ತಂತ್ರಿ ಕೇಶವ ಶಾಂತಿ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಧ್ಯಕ್ಷ ವಾಸು ಪೂಜಾರಿ ಲೊರೆಟ್ಟೋ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ, ಆರ್ಥಿಕ ಸಮಿತಿ ಸಂಚಾಲಕ ಬೇಬಿ ಕುಂದರ್, ಹೊರೆಕಾಣಿಕೆ ಸಮಿತಿ ಸಂಚಾಲಕ ಮಚ್ಚೇಂದ್ರ ಸಾಲ್ಯಾನ್, ಗುತ್ತಿಗೆದಾರ ಸುದರ್ಶನ್ ಬಜ ಶುಭ ಹಾರೈಸಿದರು.

ವಿದ್ಯುತ್ ಗುತ್ತಿಗೆದಾರ ಜಗತ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೇಲ್ವಿಚಾರಕ ಕೇಶವ ಪಿ., ಮಹಿಳಾ ಸಮಿತಿ ಅಧ್ಯಕ್ಷೆ ನಮಿತಾ ಹರೀಶ್, ಪುರಸಭಾ ನಾಮನಿರ್ದೇಶಿತ ಸದಸ್ಯ ಚಂದಪ್ಪ ಪೂಜಾರಿ, ಸೋಮಪ್ಪ ಕೋಟ್ಯಾನ್ ತುಂಬೆ ಮತ್ತಿತರರು ಇದ್ದರು.

ಜಿರ್ನೋದ್ದಾರ ಸಮಿತಿ ಅಧ್ಯಕ್ಷ ಹರೀಶ್ ಕೋಟ್ಯಾನ್ ಕುದನೆ ಪ್ರಾಸ್ತಾವಿಕ ಮಾತನಾಡಿದರು. ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ದೇವಪ್ಪ ಕುಲಾಲ್ ಪಂಜಿಕಲ್ಲು ಸ್ವಾಗತಿಸಿ, ಗೋಪಾಲ ಅಂಚನ್ ಮತ್ತು ಜಯಾನಂದ ಲಾಯಿಲ ಕಾರ್ಯಕ್ರಮ ನಿರೂಪಿಸಿದರು.  

Leave a Comment