ತುಂಬೆ :ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಲಕ್ಷಾಂತರ ರೂ ಮೌಲ್ಯದ ನಗ-ನಗದು ಕಳವು

Coastal Bulletin
ತುಂಬೆ :ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಲಕ್ಷಾಂತರ ರೂ ಮೌಲ್ಯದ ನಗ-ನಗದು ಕಳವು

ಬಂಟ್ವಾಳ: ತಾಲೂಕಿನ ತುಂಬೆಯಲ್ಲಿರುವ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕಳ್ಳರ ತಂಡ ಸೋಮವಾರ ತಡರಾತ್ರಿ ಮುಂಬಾಗಿಲಿನ ಚಿಲಕ ಮುರಿದು ಒಳಗೆ ಪ್ರವೇಶ ಮಾಡಿ ಸುಮಾರು 2 ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿದ್ದಾರೆ ಎಂದು ಹೇಳಲಾಗಿದೆ. ದೇವಸ್ಥಾನದ ಕಛೇರಿಯಲ್ಲಿರಿಸಿದ್ದ ಸುಮಾರು ಒಂದುವರೆ ಕೆ.ಜಿ ತೂಕದ ಮಹಾಲಿಂಗೇಶ್ವರ ದೇವರ ಬೆಳ್ಳಿಯ ಜಲದ್ರೋಣವನ್ನು ಕಳ್ಳತನ ಮಾಡಲಾಗಿದೆ.ಇದರ ಜೊತೆಗೆ ಗೊದ್ರೇಜ್ , ಕ್ಯಾಸ್ ಡ್ರಾಯರ್ ಹಾಗೂ ಕಾಣಿಕೆ ಹುಂಡಿಯಲ್ಲಿದ್ದ ಸುಮಾರು 50 ಸಾವಿರದಷ್ಟು ಹಣವನ್ನು ಕೂಡ ಕಳವು ಮಾಡಲಾಗಿದೆ.

ಇಂದು ಬೆಳಿಗ್ಗೆ ದೇವಸ್ಥಾನದ ಸಿಬ್ಬಂದಿಯೊರ್ವರು 6.ಗಂಟೆಗೆ ಬಂದಾಗ ಮುಂಬಾಗಿಲು ಚಿಲಕ ಮುರಿದಿದ್ದು ಬಾಗಿಲು ತೆರೆದಿರುವುದು ಗಮನಕ್ಕೆ ಬಂದಿದೆ. ಕೂಡಲೇ ಅವರು ದೇವಸ್ಥಾನದ ಸೇವಾ ಸಮಿತಿಯ ಗೌರವಾಧ್ಯಕ್ಷ

ಪ್ರಕಾಶ್ ಶೆಟ್ಟಿ ತುಂಬೆಯವರಿಗೆ ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್.ಐ‌.ಹರೀಶ್, ಶ್ವಾನ ದಳ ಮತ್ತು ಬೆರಳಚ್ಚು ತಜ್ಞರು ಆಗಮಿಸಿದ್ದು ತನಿಖೆ ನಡೆಯುತ್ತಿದೆ.

Leave a Comment