ಬಂಟ್ವಾಳ :ತಾಲೂಕಿನ ಕರಿಯಂಗಳ ಗ್ರಾಮ ಪಂಚಾಯತ್ ನಲ್ಲಿ ಮಹಿಳಾ ಹಾಗೂ ಮಕ್ಕಳ ಗ್ರಾಮ ಸಭೆಯು ಪಂಚಾಯತ್ ಸಭಾಂಗಣದಲ್ಲಿ ಜ. 6ರಂದು ಮಂಗಳವಾರ ನಡೆಯಿತು.
ಈ ಸಂದರ್ಭದಲ್ಲಿ ಕರಿಯಂಗಳ ಗ್ರಾಮದ ಜೇರ್ಲಗುಡ್ಡೆ ನಿವಾಸಿ ಕೂಸ ಬಂಗೇರ ಹಾಗೂ ಪ್ರೇಮ ದಂಪತಿಗಳ ಪುತ್ರಿ ಕು.ನಿಶ್ಮಿತಾ ಇವರು ಭಾರತೀಯ ಗಡಿ ಭದ್ರತಾ ಪಡೆಯಲ್ಲಿ ಸೇವೆ ಸಲ್ಲಿಸಲು ಆಯ್ಕೆಯಾದ ಹಿನ್ನಲೆಯಲ್ಲಿ ಗ್ರಾಮ ಪಂಚಾಯತ್ ವತಿಯಿಂದ
ಅಭಿನಂದಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಕರಿಯಂಗಳ ಗ್ರಾ ಪಂ ಅಧ್ಯಕ್ಷೆ ರಾಧಾ ಲೋಕೇಶ್, ಉಪಾಧ್ಯಕ್ಷ ರಾಜು ಕೋಟ್ಯಾನ್,ಪಿ ಡಿ ಒ ವಸಂತಿ,ಮಾಜಿ ಅಧ್ಯಕ್ಷ ಚಂದ್ರಹಾಸ ಪಲ್ಲಿಪಾಡಿ, ಪಂ ಸದಸ್ಯರು, ಸಿಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.















