ಬಂಟ್ವಾಳ:ಪಾಣೆಮಂಗಳೂರು ಶ್ರೀ ಭಯಂಕೇಶ್ವರ ಸದಾಶಿವ ದೇವಸ್ಥಾನವು ನೇತ್ರಾವತಿ ನದಿ ತೀರದಲ್ಲಿದ್ದು, ನರಿಕೊಂಬು ಮತ್ತು ಶಂಭೂರು ಗ್ರಾಮಗಳ ಭಕ್ತರ ಭಕ್ತಿಗೆ ಸುಲಭವಾಗಿ ಒಲಿಯುವ ಶಿವನು ಮಹಾ ಶಕ್ತಿದಾಯಕನಾಗಿ ಗೋಚರಿಸುತ್ತಿದ್ದಾನೆ. ಗ್ರಾಮದಲ್ಲಿ ತಾಯಂದಿರು ಮಕ್ಕಳನ್ನು ದೇವಸ್ಥಾನಕ್ಕೆ ಕರೆತಂದು ಸಂಸ್ಕಾರ ನೀಡಬೇಕು ಎಂದು ಮಾಣಿಲ ಶ್ರೀಧಾಮ ಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದ್ದಾರೆ. ಇಲ್ಲಿನ ಪಾಣೆಮಂಗಳೂರು ಶ್ರೀ ಭಯಂಕೇಶ್ವರ ಸದಾಶಿವ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ಮಂಗಳವಾರ ಸಂಜೆ ನಡೆದ ಧಾರ್ಮಿಕ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು. ಶರವು ಮಹಾಗಣಪತಿ ದೇವಳದ ಮೊಕ್ತೇಸರ ರಾಘವೇಂದ್ರ ಶಾಸ್ತ್ರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,' ಸುಮಾರು 700 ವರ್ಷಗಳ ಹಿನ್ನೆಲೆ ಹೊಂದಿರುವ ಭಯಂಕೇಶ್ವರ ದೇವಳದಲ್ಲಿ ರಥೋತ್ಸವ ಸಹಿತ ಜಾತ್ರೆ ನಡೆಯುತ್ತಿತ್ತು ಎಂದರು.
ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ವಾಸ್ತುಶಿಲ್ಪಿ ಪ್ರಸಾದ್ ಮುನಿಯಂಗಳ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಮಾಧವ ಗೌಡ, ಶಾರದಾ ವಿದ್ಯಾಲಯ ಟ್ರಸ್ಟಿ ಸುಧಾಕರ ರಾವ್ ಪೇಜಾವರ, ಉದ್ಯಮಿ ಸೂರ್ಯನಾರಾಯಣ ರಾವ್ ಪತ್ತುಮುಡಿ, ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಪ್ರದೀಪ ಕುಮಾರ್ ಕಲ್ಕೂರ, ಧಾರ್ಮಿಕ ಪರಿಷತ್ ಮಾಜಿ ಸದಸ್ಯ ಜಗನ್ನಾಥ ಚೌಟ ಬದಿಗುಡ್ಡೆ, ಕಿಯೋನಿಕ್ಸ್ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ್, ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ರಂಗೋಲಿ, ತುಂಬೆ ಮಹಾಲಿಂಗೇಶ್ವರ ದೇವಳದ ಅಧ್ಯಕ್ಷ ಚಂದ್ರಪ್ರಕಾಶ ಶೆಟ್ಟಿ, ಮೂರ್ತೆದಾರರ ಮಹಾ ಮಂಡಲ ಅಧ್ಯಕ್ಷ ಕೆ.ಸಂಜೀವ ಪೂಜಾರಿ ಶುಭ ಹಾರೈಸಿದರು.
ಸಮಿತಿ ಸಂಚಾಲಕ ಎನ್.ಪ್ರಕಾಶ ಕಾರಂತ, ಉಪಾಧ್ಯಕ್ಷ ಬಿ.ರಘು ಸಪಲ್ಯ, ಕಾರ್ಯದರ್ಶಿ ಲೋಕೇಶ ಕೆ., ಪದ್ಮನಾಭ ಮಯ್ಯ ಏಲಬೆ, ಕೃಷ್ಣಪ್ಪ ಗಾಣಿಗ, ಕೆ.ಶಂಕರ ನಾರಾಯಣ ರಾವ್, ಭುವನೇಶ್ ಪಚ್ಚಿನಡ್ಕ, ಸಂಜೀವ ಸಪಲ್ಯ, ಪುರುಷೋತ್ತಮ ಸಾಲ್ಯಾನ್,
ಪ್ರೇಮನಾಥ ಶೆಟ್ಟಿ, ಪುರುಷೋತ್ತಮ ಬಂಗೇರ, ಯೋಗೀಶ ಸಪಲ್ಯ ಬೋಳಂತೂರು, ವೇದವ ಗಾಣಿಗ, ಭುವನೇಶ್ ಮೊಗನರ್ಾಡು ಮತ್ತಿತರರು ಇದ್ದರು.
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ರಘುನಾಥ ಸೋಮಯಾಜಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಬ್ರಹ್ಮಕಲಶ ಸಮಿತಿ ಅಧ್ಯಕ್ಷ ಜಗನ್ನಾಥ ಬಂಗೇರ ನಿರ್ಮಲ್ ವಂದಿಸಿದರು. ಸಾಹಿತಿ ಜಯಾನಂದ ಪೆರಾಜೆ ಕಾರ್ಯಕ್ರಮ ನಿರೂಪಿಸಿದರು.
ಇದೇ ವೇಳೆ ಸ್ಥಳೀಯ ಪ್ರತಿಭೆಗಳಿಂದ ಭರತನಾಟ್ಯ ಪ್ರದರ್ಶನ ಮತ್ತು ಚಾಪರ್ಕ ತಂಡದಿಂದ ನಾಟಕ ಪ್ರದರ್ಶನಗೊಂಡಿತು.
ಆಕರ್ಷಕ ಹಸಿರುವಾಣಿ ಹೊರೆ ಕಾಣಿಕೆ ಮೆರವಣಿಗೆ :
ಶ್ರೀ ಭಯಂಕೇಶ್ವರ ಸದಾಶಿವ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ವೈಭವದ ಹೊರೆಕಾಣಿಕೆ ಮೆರವಣಿಗೆ ಮಂಗಳವಾರ ನಡೆಯಿತು.ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಅವರು ದೀಪಪ್ರಜ್ವಲನಗೈದು, ಕಾರ್ಯಕ್ರಮ ನಿರ್ವಿಘ್ನವಾಗಿ ನೆರವೇರಲಿ ಎಂದು ಹಾರೈಸಿದರು.
ನರಿಕೊಂಬು ದೊಂಪದಬಳಿಯ ನಾಲ್ಕೈತ್ತಾಯ ದೈವಸ್ಥಾನದಿಂದ ಹೊರಟ ಮೆರವಣಿಗೆ ನರಿಕೊಂಬು ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನದಿಂದ ಕುರ್ಚಿಪಲ್ಲ, ಸತ್ಯದೇವತೆ ಕಲ್ಲುರ್ಟಿ ದೈವಸ್ಥಾನ, ಪಾಣೆಮಂಗಳೂರು ಶ್ರೀ ವೀರವಿಠಲ ದೇವಸ್ಥಾನದಿಂದ ಶ್ರೀ ಭಯಂಕೇಶ್ವರ ಸದಾಶಿವ ಕ್ಷೇತ್ರಕ್ಕೆ ತಲುಪಿತು. ಹನುಮಂತನ ಟ್ಯಾಬ್ಲೊ ಸಹಿತ ವಿವಿಧ ಟ್ಯಾಬ್ಲೊಗಳು, ಚೆಂಡೆ ಸಹಿತ ಆಕರ್ಷಕ ಪ್ರದರ್ಶನಗಳೊಂದಿಗೆ ಸ್ಥಳೀಯ ಗಣ್ಯರು ಮೆರವಣಿಗೆಯಲ್ಲಿ ಸಾಗಿದರು.









