ಬೆಂಗಳೂರು: ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಲ್ಲಿನ 5, 8, 9 ಮತ್ತು 11ನೇ ತರಗತಿಗೆ ಬೋರ್ಡ್ ಎಕ್ಸಾಂ ಮಾಡಲು ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ ರದ್ದು ಮಾಡಿದೆ.
ಕಳೆದ ಡಿಸೆಂಬರ್ 2023ರಲ್ಲಿ ರಾಜ್ಯ ಸರ್ಕಾರ 5, 8, 9 ಮತ್ತು 11ನೇ ತರಗತಿಗೆ ಬೋರ್ಡ್ ಎಕ್ಸಾಂ ಮಾಡುವ ಸುತ್ತೋಲೆ ಹೊರಡಿಸಿತ್ತು. ಸರ್ಕಾರದ ಸುತ್ತೋಲೆಯನ್ನು ಪ್ರಶ್ನಿಸಿ ರೂಪ್ಸಾ ಅನುದಾನಿತ ಖಾಸಗಿ ಶಾಲೆಗಳ ಒಕ್ಕೂಟ ಹೈಕೋರ್ಟ್ ನಲ್ಲಿ
ರಿಟ್ ಅರ್ಜಿ ಸಲ್ಲಿಸಿತ್ತು . ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಹೊಸಮನಿ ಅವರಿದ್ದ ನ್ಯಾಯಪೀಠ 5,8,9ನೇ ತರಗತಿಗಳ ಬೋರ್ಡ್ ಪರೀಕ್ಷೆಯನ್ನು ರದ್ದು ಮಾಡಿ ಆದೇಶ ನೀಡಿದೆ.
ಬೋರ್ಡ್ ಪರೀಕ್ಷೆಗಳಿಂದ ವಿದ್ಯಾರ್ಥಿಗಳಿಗೆ ಬಿಗ್ ರಿಲೀಫ್ ಸಿಕ್ಕಿದೆ ,









