ಬಂಟ್ವಾಳ :ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಇದರ ನೂತನ ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭವು ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಅಧ್ಯಕ್ಷೆ ಪ್ರಮೀಳ ಮಾಣೂರು ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.
ಸಮಾರಂಭದಲ್ಲಿ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಅನುವಂಶಿಕ ಪ್ರಧಾನ ಅರ್ಚಕ ರಾಮ್ ಭಟ್ ದೀಪ ಪ್ರಜ್ವಲಿಸುವರು. ಉದ್ಯಮಿ ರಘುನಾಥ ಸೋಮಯಾಜಿ ಉದ್ಘಾಟಿಸುವರು.
ಬಂಟ್ವಾಳ ತಾಲೂಕು ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ರಂಗೋಲಿ, ದ.ಕ.ಜಿಲ್ಲಾ ಧಾರ್ಮಿಕ ಪರಿಷತ್ತು ಸದಸ್ಯ ಜಗನ್ನಾಥ ಚೌಟ ಬದಿಗುಡ್ಡೆ, ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಘಟಕದ ಅಧ್ಯಕ್ಷ ಪ್ರವೀಣ್ ಕುಮಾರ್ ಕೋಡಿಯಾಲ್ ಬೈಲ್, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ
ರಾಜೇಶ್ ಸ್ಕೈಲಾರ್ಕ್, ತಾರಾನಾಥ ಶೆಟ್ಟಿ ಬೋಳಾರ, ಹಿರಿಯ ಯಕ್ಷಗಾನ ಕಲಾವಿದ ಶಿವರಾಮ ಜೋಗಿ ಡಾ. ಮಾಲತಿ ಶೆಟ್ಟಿ ಮಾಣೂರು ಅತಿಥಿಗಳಾಗಿ ಭಾಗವಹಿಸುವರು ಎಂದರು.
ಸುದ್ದಿಗೋಷ್ಟಿಯಲ್ಲಿ ಕೋಶಾಧಿಕಾರಿ ಬಬಿತಾ ಎಸ್.ಎಮ್.,ಉಪಾಧ್ಯಕ್ಷೆ ಪ್ರತಿಭಾ ಪಿ ಶೆಟ್ಟಿ, ಜೊತೆ ಕಾರ್ಯದರ್ಶಿ ಲಕ್ಷ್ಮೀ ಯಶವಂತ ಶೆಟ್ಟಿ ತುಂಬೆ, ಗೌರವ ಸಲಹೆಗಾರ ಸದಾಶಿವ ಡಿ. ತುಂಬೆ, ಸಂಘಟನಾ ಕಾರ್ಯದರ್ಶಿ ಚಂದ್ರಹಾಸ ಕಡೆಗೋಳಿ, ಸಾಂಸ್ಕೃತಿಕ ಕಾರ್ಯದರ್ಶಿ ದಿನೆಶ್ ಶೆಟ್ಟಿ ಕೊಟ್ಟಿಂಜ ಉಪಸ್ಥಿತರಿದ್ದರು










