ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಬಂಟ್ವಾಳ ತಾಲೂಕು ಇದರ ಆಶ್ರಯದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆ, ಮಧ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ ಹಾಗೂ ಇತರ ಸಂಸ್ಥೆಗಳ ಸಹಯೋಗದೊಂದಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಬೆಳ್ತಂಗಡಿ ಇದರ ವಿಸ್ತರಣ ಕಾರ್ಯಕ್ರಮದ ಅಂಗವಾಗಿ 1540ನೇ ಮಧ್ಯವರ್ಜನ ಶಿಬಿರ ಜೂ.7 ಮಂಗಳವಾರದಿಂದ ಜೂ.14 ಮಂಗಳವಾರದವರೆಗೆ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಲಿದೆ.
ಜೂ.7ರಂದು ಬೆಳಿಗ್ಗೆ 11 ಗಂಟೆಗೆ ತಹಶೀಲ್ದಾರ್ ಡಾ. ಸ್ಮಿತಾ ರಾಮು ಉದ್ಘಾಟಿಸುವರು. 1540ನೇ ಮಧ್ಯವರ್ಜನ ಶಿಬಿರದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಐತಪ್ಪ ಆಳ್ವ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಶ್ರೀ. ಕ್ಷೇ. ಧ. ಗ್ರಾಮಾಭಿವೃಧ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಇದರ ಪ್ರಾದೇಶಿಕ ನಿರ್ದೇಶಕ ವಸಂತ ಸಾಲ್ಯಾನ್, ಲಯನ್ಸ್ ಕ್ಲಬ್ ಬಂಟ್ವಾಳದ ಅಧ್ಯಕ್ಷ ವಸಂತ ಬಾಳಿಗ, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ, ಪೊಲೀಸ್ ನಿರೀಕ್ಷಕ ವಿವೇಕಾನಂದ, ಜನಜಾಗೃತಿ ವೇದಿಕೆ ಪೂರ್ವಾಧ್ಯಕ್ಷರಾದ ರುಕ್ಮಯ ಪೂಜಾರಿ, ಕೆಯ್ಯೂರು ನಾರಾಯಣ ಭಟ್, ಕಿರಣ್ ಹೆಗ್ಡೆ ಉಪಸ್ಥಿತರಿರುವರು.
ಜೂ.14ರಂದು ಮಧ್ಯಾಹ್ನ 12 ಗಂಟೆಗೆ
ಸಮಾರೋಪ ಸಮಾರಂಭ ನಡೆಯಲಿದ್ದು ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡುವರು, ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ರೊನಾಲ್ಡ್ ಡಿಸೋಜಾ ಅಧ್ಯಕ್ಷತೆ ವಹಿಸುವರು, ಮುಖ್ಯ ಅತಿಥಿಗಳಾಗಿ ಬಂಟ್ವಾಳ ಶಾಸಕ ರಾಜೇಶ್ ನಾಕ್, ಮಾಜಿ ಸಚಿವ ಬಿ.ರಮಾನಾಥ ರೈ, ಬಂಟ್ವಾಳ ಉಪವಿಭಾಗದ ಪೊಲೀಸ್ ಅಧೀಕ್ಷಕ ಶಿವಾಂಶು ರಜಪೂತ್, ಲೊರೆಟ್ಟೊ ಮಾತಾ ಚರ್ಚ್‌ನ ಧರ್ಮಗುರುಗಳಾದ ರೆ.ಫಾ. ಫ್ರಾನ್ಸಿಸ್ ಕ್ರಾಸ್ತ, ಜನಜಗೃತಿ ವೇದಿಕೆ ಸ್ಥಾಪಕಾಧ್ಯಕ್ಷ ಎ.ಸಿ. ಭಂಡಾರಿ, ರೋಟರಿ ಕ್ಲಬ್ ಜಿಲ್ಲಾ ನಿಯೋಜಿತ ಗವರ್ನರ್ ಪ್ರಕಾಶ್ ಕಾರಂತ್, ನಿಕಟಪೂರ್ವ ಅಧ್ಯಕ್ಷ ಬಾಲಕೃಷ್ಣ ಆಳ್ವ, ಕೇಂದ್ರ ಒಕ್ಕೂಟ ಸಮಿತಿ ಅಧ್ಯಕ್ಷ ಮಾಧವ ವಳವೂರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ













