ಪುತ್ತೂರು : ಪುತ್ತೂರು ಮೂಲದ ಹೆಡ್ ಕಾನ್ಸ್‌ಟೇಬಲ್ ಒಬ್ಬರು ಹೃದಯಾಘಾತದಿಂದ ನಿಧನರಾಗಿದ್ದಾರೆ.
2000ನೇ ಇಸವಿಯಲ್ಲಿ ಪೋಲಿಸ್ ಇಲಾಖೆಗೆ ಸೇರಿದ್ದರು. ಈಗ ಅವರಿಗೆ 44 ವರ್ಷವಾಗಿತ್ತು. ಸದ್ಯಕ್ಕೆ ಕೊಣಾಜೆ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇಂದು ಕರ್ತವ್ಯ ಮಾಡುತ್ತಿರುವಾಗ ತೀವ್ರ
ಅಸ್ವಸ್ಥರಾಗಿ ಕುಸಿದು ಬಿದ್ದ ಇವರನ್ನು ಕಣಚೂರು ಆಸ್ಪತ್ರೆಗೆ ದಾಖಲಿಸಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ಇವರು ಪುತ್ತೂರು ತಾಲೂಕಿನ ಸವಣೂರು ಗ್ರಾಮದವರಾಗಿದ್ದರು. ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
















