ಯುವ ಪಶುವೈದ್ಯೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

Coastal Bulletin
ಯುವ ಪಶುವೈದ್ಯೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ದಕ್ಷಿಣ ಕನ್ನಡ : ಜಿಲ್ಲೆಯ ಪುತ್ತೂರಿನ ಪ್ರತಿಭಾವಂತ ಯುವ ಪಶುವೈದ್ಯೆಯೊಬ್ಬರು ಮಂಗಳೂರಿನ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಸೋಮವಾರ ರಾತ್ರಿ ನಡೆದಿದೆ.

ಪುತ್ತೂರು ತಾಲೂಕಿನ ಬಪ್ಪಳಿಗೆ ನಿವಾಸಿ, ಖ್ಯಾತ ಚಾರ್ಟೆಡ್ ಅಕೌಂಟೆಂಟ್ ಗಣೇಶ್ ಜೋಶಿ ಅವರ ಪುತ್ರಿ ಡಾ. ಕೀರ್ತನಾ ಜೋಶಿ (27) ಅವರೇ ದುರಂತ ಅಂತ್ಯ ಕಂಡವರು. ಮಂಗಳೂರಿನಲ್ಲಿ ಪಶು ವೈದ್ಯೆಯಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ಕೀರ್ತನಾ, ಸೋಮವಾರ ರಾತ್ರಿ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಇಹಲೋಕ ತ್ಯಜಿಸಿದ್ದಾರೆ. ಅವರ ಆತ್ಮಹ*ತ್ಯೆಗೆ ನಿಖರವಾದ ಕಾರಣಗಳು ಸದ್ಯಕ್ಕೆ ತಿಳಿದುಬಂದಿಲ್ಲ. ಆದರೆ, ಈ ಘಟನೆ ಅವರ ಕುಟುಂಬ ಮತ್ತು

ಸ್ನೇಹಿತರ ವಲಯದಲ್ಲಿ ತೀವ್ರ ಆಘಾತವನ್ನುಂಟುಮಾಡಿದೆ.

ಪಶು ವೈದ್ಯಕೀಯದಲ್ಲಿ ಸ್ನಾತಕೋತ್ತರ ಪದವಿ (ಎಂ.ಡಿ.) ಪಡೆದಿದ್ದ ಡಾ. ಕೀರ್ತನಾ ಜೋಶಿ ಅವರು ಶಾಲಾ ಶಿಕ್ಷಣದಿಂದ ವೈದ್ಯರಾಗುವವರೆಗೂ ಅತ್ಯಂತ ಪ್ರತಿಭಾವಂತೆ ಎನಿಸಿಕೊಂಡಿದ್ದರು. ತಮ್ಮ ವೃತ್ತಿ ಜೀವನದಲ್ಲಿ ಪುತ್ತೂರು, ಕೊಯಿಲ ಹಾಗೂ ಮಂಗಳೂರಿನಲ್ಲಿ ಪಶು ವೈದ್ಯರಾಗಿ ಕಾರ್ಯನಿರ್ವಹಿಸಿ, ಪ್ರಾಣಿಪ್ರಿಯರ ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರ ಸೌಮ್ಯ ಸ್ವಭಾವ ಮತ್ತು ವೃತ್ತಿಪರತೆಯು ಎಲ್ಲರಿಗೂ ಚಿರಪರಿಚಿತವಾಗಿತ್ತು. ಇಂತಹ ಉಜ್ವಲ ಭವಿಷ್ಯವಿದ್ದ ವೈದ್ಯೆಯೊಬ್ಬರು ದಿಢೀರ್ ಸಾವಿನ ನಿರ್ಧಾರ ಕೈಗೊಂಡಿರುವುದು ಎಲ್ಲರನ್ನೂ ದಿಗ್ಭ್ರಮೆಗೊಳಿಸಿದೆ.

Leave a Comment