ಬಂಟ್ವಾಳ: ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಕಾಪು ಮಹತೋಭಾರ ಶ್ರೀ ಉಮಾಮಹೇಶ್ವರ ದೇವಸ್ಥಾನದ ಪುನರ್ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ವಿಜ್ಞಾಪನಾ ಪತ್ರ ಬಿಡುಗಡೆ ಕಾರ್ಯಕ್ರಮ ಕ್ಷೇತ್ರದ ತಂತ್ರಿ ಶ್ರೀಪಾದ ಪಾಂಗಣ್ಣಾಯ ಅವರ ಮಾರ್ಗದರ್ಶನದಲ್ಲಿ ಸೆ.೪ರಂದು ಬೆಳಗ್ಗೆ ಪದವು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.
ಕಟೀಲು ದೇಗುಲದ ಆನುವಂಶಿಕ ಪ್ರ.ಅರ್ಚಕ ಬ್ರಹ್ಮಶ್ರೀ ಕಮಲಾದೇವಿ ಪ್ರಸಾದ ಆಸ್ರಣ್ಣ ಅವರು ವಿಜ್ಞಾಪನಾ ಪತ್ರ ಬಿಡುಗಡೆಗೊಳಿಸಿ ಮಾತನಾಡಿ, ದೇವ ಭಕ್ತಿ, ದೇಶಭಕ್ತಿಗಳನ್ನು ನಾವೆಲ್ಲರೂ ಹೊಂದಬೇಕು. ದೇವಾಲಯಗಳು ಸುಸ್ಥಿಯಲ್ಲಿದ್ದಾಗ ರಾಷ್ಟ್ರವು ಸುಭಿಕ್ಷವಾಗಿ ಉನ್ನತಿಯಾಗುತ್ತದೆ ಎಮದು ಹೇಳಿದರು.
ಕ್ಷೇತ್ರದ ತಂತ್ರಿ ವೇ.ಮೂ. ಶ್ರೀಪಾದ ಪಾಂಗಣ್ಣಾಯ ನಡ್ವಂತಾಡಿ ಅವರು ಮಾತನಾಡಿ, ದೇವಾಲಯಗಳನ್ನು ಪುನರ್ ನಿರ್ಮಾಣಗೊಳಿಸಿದಾಗ ಊರಿನ ಸಕಲ ದೋಷಗಳು ಪರಿಹಾರವಾಗಿ, ಊರಿನ ಹಾಗೂ ಲೋಕೋದ್ಧಾರವಾಗುತ್ತದೆ ಎಂದರು.
ಶ್ರೀ ಕ್ಷೇ.ಧ.ಗ್ರಾ.ಯೋಜನೆ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸುಽಂದ್ರ ವಿಷ್ಣು ತೀರ್ಥ ಪ್ರಭು ಪಾದರು ಮಾವಿನಕಟ್ಟೆ,
ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ, ಚೆನ್ನೈತ್ತೋಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ರಾಜೇಂದ್ರ, ಅಜ್ಜಿಬೆಟ್ಟು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪ್ರಕಾಶ್ ಬಂಗೇರ ಕಲ್ಲು ಕೊಡಂಗೆ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಅಮ್ಮು ರೈ ಹರ್ಕಾಡಿ, ಆಡಳಿತ ಸಮಿತಿ ಅಧ್ಯಕ್ಷ ಪ್ರಕಾಶ್ ಆಳ್ವ ವಾಂಬೆಟ್ಟು, ದೇವಸ್ಥಾನದ ಅರ್ಚಕ ಪ್ರಸನ್ನ ಕಕೃಣ್ಣಾಯ, ಜೀರ್ಣೋದ್ದಾರ ಸಮಿತಿ ಮತ್ತು ಆಡಳಿತ ಸಮಿತಿಯ ಪದಾಽಕಾರಿಗಳು,ಸದಸ್ಯರು ಉಪಸ್ಥಿತರಿದ್ದರು.
ಪ್ರಧಾನ ಕಾರ್ಯದರ್ಶಿ ಯೋಗೀಶ್ ಕಲಸಡ್ಕ ಸ್ವಾಗತಿಸಿದರು. ಶಿಕ್ಷಕ ಚಂದಪ್ಪ ಪೂಜಾರಿ ವಂದಿಸಿದರು. ಜತೆ ಕಾರ್ಯದರ್ಶಿ ಉದಯ ಕುಮಾರ್ ಶೆಟ್ಟಿ ಮೇಲ್ಮನೆ ಕಾರ್ಯಕ್ರಮ ನಿರೂಪಿಸಿದರು.














