ಬಂಟ್ವಾಳ: ಸಮಾಜದಲ್ಲಿ ಉತ್ತಮ ಸಂಸ್ಕಾರ ಮತ್ತು ರಾಷ್ಟ್ರಭಕ್ತಿ ಸಹಿತ ಮಕ್ಕಳಿಗೆ ಅಕ್ಷರಾಭ್ಯಾಸ ನೀಡಿ ಸತ್ಪ್ರಜೆಗಳನ್ನು ರೂಪಿಸುವ ಶಿಕ್ಷಕರಿಗೆ ಮಹತ್ತರ ಸ್ಥಾನಮಾನ ಇದೆ. ಸಕರ್ಾರಿ ಮಟ್ಟದಲ್ಲಿ ನಡೆಯುವ ವಿವಿಧ ಜಯಂತಿ ಉತ್ಸವ ಆಚರಣೆ ಕಾಟಾಚಾರಕ್ಕೆ ನಡೆಯುತ್ತಿದ್ದು, ಶಿಕ್ಷಕರ ದಿನಾಚರಣೆ ಮಾತ್ರ ಎಲ್ಲರ ಒಗ್ಗೂಡುವಿಕೆಯಲ್ಲಿ ಪ್ರತೀ ವರ್ಷ ಯಶಸ್ವಿಯಾಗಿ ನಡೆಯುತ್ತಿದೆ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಹೇಳಿದ್ದಾರೆ.
ಇಲ್ಲಿನ ಮೊಡಂಕಾಪು ಇನ್ಫೆಂಟ್ ಜೀಸಸ್ ಚರ್ಚ್ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಮತ್ತು ಗುರುವಂದನೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಉಜಿರೆ ಎಸ್ ಡಿ ಎಂ ವಸತಿ ಶಾಲೆ ಪ್ರಾಧ್ಯಾಪಕ ಡಾ.ಕೃಷ್ಣಮೂರ್ತಿ ಉಪನ್ಯಾಸ ನೀಡಿದರು. 'ಮಕ್ಕಳಿಗೆ ನೀಡುವ ಶಿಕ್ಷಣದಲ್ಲಿ ರಾಜಕೀಯ ಬೆಸುಗೆ ಸಲ್ಲದು. ರಾಜಕೀಯ ಪ್ರೇರಿತ ಶಿಕ್ಷಣದಿಂದ ದೇಶದ ಅವನತಿಗೆ ಕಾರಣವಾಗುತ್ತದೆ' ಎಂದರು.
ಮೊಡಂಕಾಪು ಇನ್ಫೆಂಟ್ ಜೀಸಸ್ ಚರ್ಚ್ ನ ಧರ್ಮಗುರು ವಲೇರಿಯನ್ ಡಿಸೋಜ, ಸಕರ್ಾರಿ ನೌಕರರ ಸಂಘದ ಅಧ್ಯಕ್ಷ ಉಮಾನಾಥ ರೈ ಮೇರಾವು, ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯಶಿಕ್ಷಕ ಕೆ.ರಮೇಶ ನಾಯಕ್ ರಾಯಿ, ಅಕ್ಷರ ದಾಸೋಹ ಸಹಾಯಕ ನಿರ್ಧೆಶಕ ನೋಣಯ್ಯ ನಾಯ್ಕ್, ದೈಹಿಕ
ಶಿಕ್ಷಣ ಪರಿವೀಕ್ಷಣಾಧಿಕಾರಿ ವಿಷ್ಣುನಾರಾಯಣ ಹೆಬ್ಬಾರ್, ಕ್ಷೇತ್ರ ಸಂಪನ್ಮೂಲ ಅಧಿಕಾರಿ ರಾಘವೇಂದ್ರ ಬಳ್ಳಾಲ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನವೀನ್ ಪಿ.ಎಸ್, ಇನ್ಫೆಂಟ್ ಜೀಸಸ್ ಪ್ರೌಢಶಾಲಾ ಮುಖ್ಯಶಿಕ್ಷಕ ಮೆಲ್ವಿನ್ ಲೋಬೋ, ಡಯೆಟ್ ಉಪನ್ಯಾಸಕ ಶ್ರೀನಿವಾಸ ಅಡಿಗ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜೋಯೆಲ್ ಲೋಬೋ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷೆ ರತ್ನಾವತಿ, ಚಿತ್ರಕಲಾ ಶಿಕ್ಷಕರ ಸಂಘದ ಚೆನ್ನಕೇಶವ ಡಿ.ಆರ್. ಮತ್ತಿತರರು ಇದ್ದರು.
ಇದೇ ವೇಳೆ ನಿವೃತ್ತ ಮತ್ತು ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಸನ್ಮಾನ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಚಿತ್ರಕಲಾ ಪ್ರಾತ್ಯಕ್ಷಿಕೆ ನಡೆಯಿತು.
ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಸ್ವಾಗತಿಸಿ, ನಿವೃತ್ತ ಪ್ರಾಧ್ಯಾಪಕ ರಾಮಚಂದ್ರ ರಾವ್ ಕಾರ್ಯಕ್ರಮ ನಿರೂಪಿಸಿದರು.















