Coastal Bulletin

ಬಂಟ್ವಾಳ :ಇಲ್ಲಿನ ಬಿ.ಸಿ.ರೋಡಿನಲ್ಲಿ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಮಂಗಳವಾರ ಸಂಜೆ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಮಾಜಿ ಸಚಿವ ಬಿ.ರಮಾನಾಥ ರೈ ಅಭಿನಂದಿಸಿದರು.

ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಅವರನ್ನು ಸ್ವಾಗತಿಸಿಕೊಂಡರು. ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಇದೇ ವೇಳೆ ಪಕ್ಷ ಸಂಘಟನೆ ಬಗ್ಗೆ ಅವರು ಸಮಾಲೋಚನೆ ನಡೆಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವ ಅಭಯಚಂದ್ರ ಜೈನ್, ಎಐಸಿಸಿ ಕಾರ್ಯದರ್ಶಿ ಪಿ.ವಿ.ಮೋಹನ್, ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ,ಪಾಣೆಮಂಗಳೂರು ಮತ್ತು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಬೇಬಿ ಕುಂದರ್,

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಬಿ.ಪದ್ಮಶೇಖರ್ ಜೈನ್, ಪ್ರಮುಖರಾದ ಸುದರ್ಶನ್ ಜೈನ್, ಅಬ್ಬಾಸ್ ಅಲಿ, ಸದಾಶಿವ ಬಂಗೇರ, ಇಬ್ರಾಹಿಂ ನವಾಝ್ ಬಡಕಬೈಲು, ಜೆಸಿಂತ ಡಿ'ಸೋಜ, ಕೆ.ಪದ್ಮನಾಭ ರೈ, ಹಸೈನಾರ್, ಜನಾರ್ಧನ್ ಚೆಂಡ್ತಿಮಾರ್, ಗಂಗಾಧರ್ ಪೂಜಾರಿ, ಗಾಯತ್ರಿ, ಐಡಾ ಸುರೇಶ್, ಮಲ್ಲಿಕಾ ಪಕಳ, ಹರ್ಷದ್ ಸರವು, ಮಧುಸೂದನ್ ಶೆಣೈ, ಸಿದ್ದಿಕ್ ಸೇರಾವ್, ರೋಶನ್ ರೈ, ಉಮೇಶ್ ನೈಲಾ, ಚಂದ್ರಶೇಖರ್ ಪೂಜಾರಿ, ಇಬ್ರಾಹಿಂ ಮಂಚಿ, ವೆಂಕಪ್ಪ ಪೂಜಾರಿ ಮತ್ತಿತರರು ಇದ್ದರು.  


Leave a Comment