ಬಂಟ್ವಾಳ ವಿಧಾನಸಭಾ ಕ್ಷೇತ್ರದ ವಿವಿಧ ಮತಗಟ್ಟೆಗಳಲ್ಲಿ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸುವ ಉದ್ದೇಶದಿಂದ ಸುಳ್ಳು ಹಾಗೂ ಆಧಾರರಹಿತ ಫಾರಂ–7 ಅರ್ಜಿಗಳು ಸಲ್ಲಿಕೆಯಾಗಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸಚಿವ ಬಿ. ರಮಾನಾಥ ರೈ ಯವರ ನೇತೃತ್ವದಲ್ಲಿ ತಾಲೂಕು ಚುನಾವಣಾಧಿಕಾರಿ ಹಾಗೂ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.
ಮಾಣಿ, ಸಾಲೆತ್ತೂರು ಸೇರಿದಂತೆ ವಿವಿಧ ಮತಗಟ್ಟೆಗಳಲ್ಲಿ ಹೆಚ್ಚಿನ ಸಂಖ್ಯೆಯ ಮತದಾರರನ್ನು ಒಳಗೊಂಡಿರುವ ಫಾರಂ–7 ಅರ್ಜಿಗಳನ್ನು ತುರ್ತಾಗಿ ಹಾಗೂ ನಿಷ್ಪಕ್ಷಪಾತವಾಗಿ ಪರಿಶೀಲಿಸಿ, ಸುಳ್ಳು ಅರ್ಜಿ ಸಲ್ಲಿಸಿರುವವರ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು.ಯಾವುದೇ ಅರ್ಹ ಮತದಾರರು ತಮ್ಮ ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಮತದಾರರ ಪಟ್ಟಿಯ ಸಮಗ್ರತೆಯನ್ನು ಕಾಪಾಡಬೇಕು ಎಂದು ರಮಾನಾಥ ರೈ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ಬುಡಾ ಅಧ್ಯಕ್ಷ ಬೇಬಿ ಕುಂದರ್ ,ಚಂದ್ರಪ್ರಕಾಶ್ ಶೆಟ್ಟಿ ತುಂಬೆ,
ಪಿಯೂಸ್ ಎಲ್. ರೋಡ್ರಿಗಸ್, ಪದ್ಮಶೇಖರ ಜೈನ್, ಜಯಂತಿ ವಿ. ಪೂಜಾರಿ, ಚಂದ್ರಶೇಖರ ಭಂಡಾರಿ, ಬಾಲಕೃಷ್ಣ ಅಂಚನ್, ಸಂಜೀವ ಪೂಜಾರಿ ಕೆ, ಬಿ.ಎಂ. ಅಬ್ಬಾಸ್ ಆಲಿ, ಸುದೀಪ್ ಶೆಟ್ಟಿ ಮಾಣಿ, ಬಾಲಕೃಷ್ಣ ಆಳ್ವ, ಸುದರ್ಶನ್ ಜೈನ್ ಪಂಜಿಕಲ್ಲು, ಪದ್ಮನಾಭ ರೈ ಮಹಮ್ಮದ್ ನಂದಾವರ, ಬೊಂಡಾಲ ಚಿತ್ತರಂಜನ್ ಶೆಟ್ಟಿ, ಸದಾಶಿವ ಬಂಗೇರ, ಮನೋಹರ ನೇರಂಬೋಳು, ಐಡಾ ಸುರೇಶ್, ಉಮೇಶ್ ಬೋಳಂತೂರು, ಸುರೇಶ್ ಕುಮಾರ್ ನಾವೂರ ಮತ್ತಿತರರು ಇದ್ದರು.











