ಬಂಟ್ವಾಳ: ತಾಲೂಕಿನ ತುಂಬೆ ಸಮೀಪದ ಕಡೆಗೋಳಿಯಲ್ಲಿ ನ. 3ರಂದು ಭಾನುವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸೆಲಿನಾ ಬಸ್ ಅತಿವೇಗವಾಗಿ ಬೈಕ್‌ಗೆ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ಪ್ರವೀಣ್ ಸಾವನ್ನಪ್ಪಿದ್ದು, ಇನ್ನೋರ್ವ ಸಂದೀಪ್ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಸದ್ಯ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ ಎಂಬ ವಿಚಾರ ತಿಳಿದು ಬಂದಿದೆ.
ಕಡೆಗೋಳಿ ನಿವಾಸಿ ಪ್ರವೀಣ್ ಹಾಗೂ ಸಂದೀಪ್ ಮೃತ ದುರ್ದೈವಿಗಳು ಇಬ್ಬರು ಚಿಕ್ಕ ವಯಸ್ಸಿನಿಂದಲೇ ಆತ್ಮೀಯ ಗೆಳೆಯರು. ಇಬ್ಬರು ಸೇಲ್ಸ್ ಮ್ಯಾನ್ ಕೆಲಸಗಾರರಾಗಿದ್ದು, ತನ್ನ ಖಾಸಗಿ ಕೆಲಸವನ್ನು
ಮುಗಿಸಿ ಮನೆಗೆ ಜೊತೆಯಾಗಿ ಪ್ರಯಾಣಿಸುತ್ತಿದ್ದ ವೇಳೆ ಬಸ್ ಡಿಕ್ಕಿಯಾಗಿದೆ.
ಖಾಸಗಿ ಬಸ್ ಚಾಲಕನ ಅತಿವೇಗದ ಮತ್ತು ಅಜಾಗರೂಕತೆಯ ಚಾಲನೆಯ ಪರಿಣಾಮ ಇಬ್ಬರು ಆತ್ಮೀಯ ಸ್ನೇಹಿತರು ಪ್ರಾಣ ಕಳೆದುಕೊಂಡಿದ್ದಾರೆ.