ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿಯ ಭೀಷ್ಮ ಎಂದೇ ಗುರುತಿಸಿಕೊಂಡಿದ್ದ ಪುತ್ತೂರಿನ ಮಾಜಿ ಶಾಸಕ ಉರಿಮಜಲು ಕೆ. ರಾಮ ಭಟ್ (92)ಅವರು ಇಂದು ಸಂಜೆ ಅಲ್ಪ ಕಾಲದ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.
ವಯೋಸಹಜ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರನ್ನು ಮಂಗಳೂರು ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಬಿಜೆಪಿಯ ಪ್ರಮುಖ ನಾಯಕರಾಗಿದ್ದ ಭಟ್
, ಅಟಲ್ ಬಿಹಾರಿ ವಾಜಪೇಯಿ, ಲಾಲ್‌ಕೃಷ್ಣ ಅಡ್ವಾಣಿ ಸಹಿತ ಹಲವು ದಿಗ್ಗಜ ನಾಯಕರ ಒಡನಾಟ ಹೊಂದಿದ್ದರು














