Coastal Bulletin

ಬಂಟ್ವಾಳ ಶ್ರೀ ದೇವಿ ನೃತ್ಯಾರಾಧನಾ ಕಲಾ ಕೇಂದ್ರ (ರಿ) ಪುತ್ತೂರು ಇದರ ಅಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇದರ ಸಹಕಾರದೊಂದಿಗೆ ನೃತ್ಯಧಾರ ಮತ್ತು ಕಲಾನಯನ ಪ್ರಶಸ್ತಿ ಪ್ರದಾನ ಸಮಾರಂಭವು ಡಿ.10 ರಂದು ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಲಿದೆ.

ಸಂಜೆ 3.45 ಕ್ಕೆ ರಾಷ್ಟ್ರ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ಕಲಾವಿದ ಶ್ರೀ. ಕೆ.ಗೋವಿಂದ ಭಟ್, ಸೂರಿಕುಮೇರು ಇವರು ದೀಪಪ್ರಜ್ವಲನ ಮಾಡಲಿದ್ದಾರೆ.

ನಂತರ 4 ಗಂಟೆಗೆ ಅಂತರಾಷ್ಟ್ರೀಯ ಭರತನಾಟ್ಯ ಕಲಾವಿದ ವಿದ್ವಾನ್ ಸುಜಯ್ ಶ್ಯಾನ್ ಭೋಗ ಇವರಿಂದ ರಂಗ್ ನೃತ್ಯ ಕಾರ್ಯಕ್ರಮ ನಡೆಯಲಿದೆ.


ಸಂಜೆ 6 ಗಂಟೆಯ ಹೊತ್ತಿಗೆ ಸಭಾ ಕಲಾಪ ಜರಗಲಿದೆ.

ಇದರಲ್ಲಿ ಕನ್ನಡ ಸಾಹಿತ್ಯ ಪರಿಷತ್ತ್ ಬೆಂಗಳೂರು ಇದರ ಅಧ್ಯಕ್ಷರು ನಾಡೋಜ ಡಾ.ಮಹೆಶ್ ಜೋಶಿ ಕಾರ್ಯಕ್ರಮದಲ್ಲಿ‌ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

 ಈ ಸಂದರ್ಭದಲ್ಲಿ ರಾಷ್ಟ್ರ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ಕಲಾವಿದ ಶ್ರೀ. ಕೆ.ಗೋವಿಂದ ಭಟ್, ಸೂರಿಕುಮೇರು ಇವರಿಗೆ ಕಲಾನಯನ ಪ್ರಶಸ್ತಿ ಪ್ರದಾನ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ಕಲಾವಿದ ಶ್ರೀ ಸರಪಾಡಿ ಅಶೋಕ್ ಶೆಟ್ಟಿ ಇವರಿಗೆ ಸನ್ಮಾನ ನಡೆಯಲಿದೆ.

Leave a Comment