ಬಂಟ್ವಾಳ :ಶ್ರೀ ವೀರನಾರಾಯಣ ದೇವಸ್ಥಾನ ಕುಲಶೇಖರ ಮಂಗಳೂರು ಇಲ್ಲಿ ಫೆ.11ನೇ ಮಂಗಳವಾರದಿಂದ ಫೆ.15.ನೇ ಶನಿವಾರದ ವರೆಗೆ ಶ್ರೀ ಕ್ಷೇತ್ರದಲ್ಲಿ ವರ್ಷಂಪ್ರತಿಯಂತೆ ನಡೆಯುವ 'ಕುಂಭ ಮಹೋತ್ಸವ'ವು, ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ, ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಶ್ರೀ ಕ್ಷೇತ್ರ ಮಾಣಿಲ ಇವರ ಶುಭಾಶೀರ್ವಾದ ಗಳೊಂದಿಗೆ, ಶ್ರೀ ಕ್ಷೇತ್ರದ ತಂತ್ರಿಗಳಾದ ಶ್ರೀ ಅನಂತ ಉಪಾಧ್ಯಾಯರ ನೇತೃತ್ವದಲ್ಲಿ ಪ್ರಧಾನ ಅರ್ಚಕರಾದ ಶ್ರೀ ಜನಾರ್ಧನ ಭಟ್ಟರ ಉಪಸ್ಥಿತಿಯಲ್ಲಿ ವಿಜೃಂಭಣೆಯಿಂದ ಜರಗಲಿರುವುದು ಎಂದು ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.