ತುಳು ರಂಗಭೂಮಿ ಕಲಾವಿದ ಸುರೇಶ್ ವಿಟ್ಲ ನಿಧನ

Coastal Bulletin
ತುಳು ರಂಗಭೂಮಿ ಕಲಾವಿದ ಸುರೇಶ್ ವಿಟ್ಲ ನಿಧನ

ಮಂಗಳೂರು; ತುಳು ರಂಗ ಭೂಮಿ ಕಲಾವಿದ ಸುರೇಶ್ ವಿಟ್ಲ(45) ವಿಧಿವಶರಾಗಿದ್ದಾರೆ. ಶಾರದಾ ಆರ್ಟ್ಸ್ ಮಂಜೇಶ್ವರ ಇದರ ಕಲಾವಿದ ಸುರೇಶ್ ವಿಟ್ಲ ಅವರು ಮನೆಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಕುಸಿದು ಬಿದ್ದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ನಂತರ ಹೆಚ್ಚಿನ ಚಿಕಿತ್ಸೆಗೆಂದು ಮಂಗಳೂರಿಗೆ ರವಾನಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಮೃತರು ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.

ಮೃತರ ಅಂತ್ಯಕ್ರಿಯೆ ಇಂದು ವಿಟ್ಲದಲ್ಲಿ ನಡೆಯಲಿದೆ.

Leave a Comment