ಮಂಗಳೂರು:ಮಂಗಳೂರಿನಲ್ಲಿ ನಡೆದ ಸಿಎಎ ವಿರೋಧಿ ಪ್ರತಿಭಟನೆ ವೇಳೆ ಪೊಲೀಸರ ಮನೆಯ ಹೆಂಗಸರ ಬಗ್ಗೆ ಅವಹೇಳನಕಾರಿಯಾಗಿ ಫೇಸ್‌ಬುಕ್ ನಲ್ಲಿ ಪೋಸ್ಟ್ ಮಾಡಿ ಅಪರಾಧಕ್ಕೆ ಪ್ರಚೋದಿಸಿದ ಆರೋಪದಲ್ಲಿ ಚಿತ್ರದುರ್ಗದ ಪಾಲವ್ವನ ಹಳ್ಳಿಯ ಯೋಗೇಶ್ ಎಸ್ (28) ಎಂಬಾತನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರಿನಲ್ಲಿ 2019 ಡಿಸೆಂಬರ್ ನಲ್ಲಿ ಸಿಎಎ ವಿರುದ್ಧ ನಡೆದ ಪ್ರತಿಭಟನೆ ವೇಳೆ ಗೋಲಿಬಾರ್ ನಡೆದು ಇಬ್ಬರು ಸಾವನ್ನಪ್ಪಿದ್ದರು. ಈ ಸಂದರ್ಭದಲ್ಲಿ ಅರೋಪಿ ಯೋಗಿ ಯೋಗೇಶ್ ಎಂಬಾತ ಫೇಸ್‌ಬುಕ್ ಪೋಸ್ಟ್ ಮಾಡಿ ಪೊಲೀಸರ ಕುಟುಂಬದಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದ. ಈತ ತನ್ನ ಫೇಸ್‌ಬುಕ್ ಖಾತೆಯಲ್ಲಿ ಪೊಲೀಸ್ ಮನೆಯ
ಹೆಂಗಸರನ್ನು ಮನೆ ನುಗ್ಗಿ ಅತ್ಯಾಚಾರ ಮಾಡಿ ಸುಡಬೇಕು ಎಂದು ಪೋಸ್ಟ್ ಮಾಡಿದ್ದ. ಇದನ್ನು ಮನಸುಗಳ ಮಾತು ಮಧುರ ಎಂಬ Fb ಪೇಜ್ ಗೆ ಟ್ಯಾಗ್ ಮಾಡಿ ಅದರ ಸ್ಟೀನ್ ಶಾಟ್ ವಾಟ್ಸಪ್ ನಲ್ಲಿ ಹರಿಯಬಿಟ್ಟಿದ್ದ. ಈ ಬಗ್ಗೆ ಮಂಗಳೂರಿನ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
















