ಬಂಟ್ವಾಳ:ತಾಲೂಕಿನ ಕರಿಯಂಗಳ ಗ್ರಾಮದ ಪುಂಚಮೆ ಎಂಬಲ್ಲಿ ಧಾರ್ಮಿಕ ಶಿಕ್ಷಣದ ಕಟ್ಟಡದಲ್ಲಿ, ಇತ್ತೀಚೆಗೆ ಅನಧಿಕೃತವಾಗಿ ನಿರ್ಮಾಣವಾಗಿರುವ ಧಾರ್ಮಿಕ ಕೇಂದ್ರದಲ್ಲಿ, ಯಾವುದೇ ಪರವಾನಿಗೆಯನ್ನು ಪಡೆಯದೇ ಧ್ವನಿವರ್ಧಕವನ್ನು ಅಳವಡಿಸಿಕೊಂಡ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುಂಚಮೆ ನಿವಾಸಿ ಯೋಗೀಶ್ ಎಂಬವರ ದೂರಿನಂತೆ,ಇಸಾಕ್ ಎಂಬವರ ಅಧ್ಯಕ್ಷತೆಯಲ್ಲಿ ಕಾರ್ಯಾಚರಿಸುತ್ತಿರುವ ಧಾರ್ಮಿಕ ಶಿಕ್ಷಣದ ಕಟ್ಟಡದಲ್ಲಿ, ಇತ್ತೀಚೆಗೆ ಅನಧಿಕೃತವಾಗಿ ನಿರ್ಮಾಣವಾಗಿರುವ ಧಾರ್ಮಿಕ ಕೇಂದ್ರದಲ್ಲಿ
ನಿಗಧಿತ ಪ್ರಮಾಣಕ್ಕಿಂತ ಹೆಚ್ಚಿನ ಧ್ವನಿಯಲ್ಲಿ ದಿನಕ್ಕೆ 05 ಬಾರಿಯಂತೆ ಅಜಾನ್ ಕೂಗುವುದರಿಂದ ಸುತ್ತಮುತ್ತಲಿನ ಪರಿಸರದಲ್ಲಿರುವ ಜನರಿಗೆ ತೊಂದರೆಯಾಗುತ್ತಿದ್ದು, ಈ ಮೂಲಕ ಧ್ವನಿವರ್ಧಕಗಳ ಬಳಕೆಯ ಬಗೆಗಿನ
ಕಾನೂನನ್ನು ಉಲ್ಲಂಘಿಸಿರುತ್ತಾರೆ ಎಂಬುದಾಗಿ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ನೀಡಿದ ದೂರನ್ನು ಸ್ವೀಕರಿಸಿಕೊಂಡು, ಮಾನ್ಯ ನ್ಯಾಯಾಲಯದಲ್ಲಿ ಅನುಮತಿ ಪಡೆದು ಸೆ.06ರಂದು ಈ ಬಗ್ಗೆ ಠಾಣೆಯಲ್ಲಿ ಅ.ಕ್ರ 133/2025 ಕಲಂ:37,92 (ಐ), 109 ಕೆಪಿ ಆಕ್ಟ್ ಹಾಗೂ 292 ಬಿಎನ್‌ಎಸ್ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.














