ಬಂಟ್ವಾಳ ಸಮಾಜ ಸೇವಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ. ರೂ 1,435.15 ಕೋಟಿ ವ್ಯವಹಾರ, 5ಕೋಟಿ ರೂ ನಿವ್ವಳ ಲಾಭ: ಸುರೇಶ್ ಕುಲಾಲ್.

Coastal Bulletin
ಬಂಟ್ವಾಳ ಸಮಾಜ ಸೇವಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ. ರೂ 1,435.15 ಕೋಟಿ ವ್ಯವಹಾರ, 5ಕೋಟಿ ರೂ ನಿವ್ವಳ ಲಾಭ: ಸುರೇಶ್ ಕುಲಾಲ್.

ಬಂಟ್ವಾಳ: ಬಂಟ್ವಾಳ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತವು 2025-26ನೇ ಸಾಲಿನಲ್ಲಿ ₹1,435.15 ಕೋಟಿ ವ್ಯವಹಾರ ನಡೆಸಿ ₹5,00,01,702.53 ನಿವ್ವಳ ಲಾಭ ಗಳಿಸಿದ್ದು, 'ಎ' ತರಗತಿಯ ವರ್ಗೀಕರಣವನ್ನು ಪಡೆದಿದೆ ಎಂದು ಸಂಘದ ಅಧ್ಯಕ್ಷ ಸುರೇಶ್ ಕುಲಾಲ್ ತಿಳಿಸಿದರು.

ಬಿಸಿರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆದ ಸಂಘದ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಂಘದ ಅಭಿವೃದ್ಧಿಯಲ್ಲಿ ಸದಸ್ಯರ ವಿಶ್ವಾಸ ಮತ್ತು ಸಹಕಾರ ಪ್ರಮುಖ ಪಾತ್ರ ವಹಿಸಿದೆ. ಸದಸ್ಯರು ಸಂಘದೊಂದಿಗೆ ನಿರಂತರವಾಗಿ ವ್ಯವಹರಿಸುವ ಮೂಲಕ ಸಂಸ್ಥೆಯ ಬೆಳವಣಿಗೆಗೆ ಬೆಂಬಲ ನೀಡಿದ್ದಾರೆ. ಆಡಳಿತ ಮಂಡಳಿಯ ನಿರ್ದೇಶಕರ ಮಾರ್ಗದರ್ಶನ, ಸಿಬ್ಬಂದಿಯ ಪ್ರಾಮಾಣಿಕ ಹಾಗೂ

ಸಿಬ್ಬಂದಿಯ ಪ್ರಾಮಾಣಿಕ ಹಾಗೂ ಸಮರ್ಪಣಾ ಮನೋಭಾವದ ಸೇವೆ ಮತ್ತು ಸದಸ್ಯರ ಸಹಕಾರದಿಂದ ಸಂಘವು ಉತ್ತಮ ಪ್ರಗತಿ ಸಾಧಿಸಲು ಸಾಧ್ಯವಾಗಿದೆ ಎಂದು ಅವರು ಹೇಳಿದರು.

ಸಂಘದಲ್ಲಿ ಪ್ರಸಕ್ತ ಸಾಲಿನಲ್ಲಿ ₹264,07,77,078.16 ಸಂಗ್ರಹವಾಗಿದ್ದು, ಇತರ ಬ್ಯಾಂಕ್‌ಗಳಲ್ಲಿ ₹57,84,38,764.20 ಧನ ವಿನಿಯೋಗ ಮಾಡಲಾಗಿದೆ. ಸದಸ್ಯರಿಗೆ ಒಟ್ಟು ₹248,99,81,859.74 3 ವಿತರಿಸಲಾಗಿದೆ ಎಂದು ತಿಳಿಸಿದರು.

ಸಂಘದ ವ್ಯವಹಾರವನ್ನು ಮತ್ತಷ್ಟು ವಿಸ್ತರಿಸುವುದರೊಂದಿಗೆ ಸದಸ್ಯರಿಗೆ ಅಗತ್ಯವಿರುವ ವಿವಿಧ ಸೇವೆಗಳನ್ನು ಪರಿಣಾಮಕಾರಿಯಾಗಿ ಒದಗಿಸುವ

ಉದ್ದೇಶ ಹೊಂದಲಾಗಿದೆ. ಸಹಕಾರ ಕ್ಷೇತ್ರದಲ್ಲಿ ಬದಲಾಗುತ್ತಿರುವ ಪರಿಸ್ಥಿತಿಗೆ ಅನುಗುಣವಾಗಿ ತಂತ್ರಜ್ಞಾನ ಆಧಾರಿತ ಸೇವೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಸಂಘದ ಮೇಲೆ ಆದ್ಯತೆ ನೀಡಲಾಗುವುದು. ಸಂಘದ ಮೇಲೆ

ಸದಸ್ಯರು ಇಟ್ಟಿರುವ ವಿಶ್ವಾಸವನ್ನು ಉಳಿಸಿಕೊಂಡು ಪಾರದರ್ಶಕ ಹಾಗೂ ಸದಸ್ಯ ಸ್ನೇಹಿ ಆಡಳಿತಕ್ಕೆ ಒತ್ತು ನೀಡಲಾಗುವುದು ಎಂದು ಅಧ್ಯಕ್ಷರು ಹೇಳಿದರು.

ಸಂಘದ ಪ್ರಧಾನ ವ್ಯವಸ್ಥಾಪಕ ಮೋಹನ್ ಎಂ.ಕೆ. ಅವರು ವಾರ್ಷಿಕ ವರದಿ ಮಂಡಿಸಿದರು.

ಉಪಾಧ್ಯಕ್ಷ ಜನಾರ್ದನ ಬೊಂಡಾಲ, ನಿರ್ದೇಶಕರಾದ ರಮೇಶ್ ಸಾಲ್ಯಾನ್, ಸುರೇಶ್ ಕುಲಾಲ್ ಎನ್., ಬಿ.ರನೇಶ್ ಸಾಲ್ಯಾನ್, ಅರುಣ್ ಕುಮಾರ್ ಕೆ., ಭೋಜ ಸಾಲಿಯಾನ್, ಪ್ರೇಮನಾಥ ಬಂಟ್ವಾಳ, ಹರೀಶ್, ವಿದ್ಯಾ, ಮಾಲತಿ ಮಚ್ಚೇಂದ್ರ, ಜಗನ್ನಿವಾಸ ಗೌಡ, ಎಂ.ಕೆ. ಗಣೇಶ್ ಸಮಗಾರ, ರೇಖಾ ನಾಯಕ್ ಹಾಗೂ ನಿವೃತ್ತ ವ್ಯವಸ್ಥಾಪಕ ಭೋಜ ಮೂಲ್ಯ ಉಪಸ್ಥಿತರಿದ್ದರು. ನಿರ್ದೇಶಕ ಸತೀಶ್‌ ಸ್ವಾಗತಿಸಿದರು. ಕಿರಣ್  ಅಟ್ಲೂರು ವಂದಿಸಿದರು.

Leave a Comment