ಬಂಟ್ವಾಳ: ಪ್ರಧಾನಿ ನರೇಂದ್ರ ಮೋದಿ ಅವರ ರಾಜಕೀಯ ಜೀವನದ 25 ವರ್ಷಗಳ ಆಡಳಿತ ಸಂಭ್ರಮಾಚರಣೆ ನಡುವೆ ಜಿಲ್ಲೆಯಲ್ಲಿ ಮುಂದಿನ 15 ವರ್ಷಗಳ ದೂರದೃಷ್ಟಿಯೊಂದಿಗೆ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಮತ್ತಿತರ ಕಾಮಗಾರಿಗಳಿಗೆ ಹೆಚ್ಚಿನ ವೇಗ ಮತ್ತು ಆದ್ಯತೆ ನೀಡಲಾಗುತ್ತದೆ ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದ್ದಾರೆ.
ಇಲ್ಲಿನ ಬಿ.ಸಿ.ರೋಡಿನಲ್ಲಿ ರೂ 22.59 ಕೋಟಿ ವೆಚ್ಚದಲ್ಲಿ ಬ್ರಹ್ಮಶ್ರೀ ನಾರಾಯಣಗುರು ವೃತ್ತದಿಂದ ಗಾಣದಪಡ್ಪು ತನಕ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಬುಧವಾರ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.
ಶೀಘ್ರದಲ್ಲೇ ರೂ 34.53 ಕೋಟಿ ವೆಚ್ಚದಲ್ಲಿ ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ಆರಂಭಗೊಳ್ಳಲಿದೆ ಎಂದರು.
ಬ್ರಹ್ಮರಕೂಟ್ಲು ಟೋಲ್ ಬಂದ್:
ಬಿ.ಸಿ.ರೋಡ್ - ಬೆಂಗಳೂರು ಮತ್ತು ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳ್ಳುತ್ತಿದ್ದಂತೆಯೇ ಬ್ರಹ್ಮರಕೂಟ್ಲು ಟೋಲ್ ಕೇಂದ್ರ ಮುಚ್ಚಲಿದೆ. ಇದಕ್ಕಾಗಿ ಯಾರೂ ನಾಟಕ ಮಾಡುವ ಅಗತ್ಯವಿಲ್ಲ. ಈಗಾಗಲೇ ಈ ಬಗ್ಗೆ ಕೇಂದ್ರ ಭೂಸಾರಿಗೆ ಸಚಿವರೊಂದಿಗೆ ನಾನು ಮಾತನಾಡಿದ್ದೇನೆ ಎಂದು ಅವರು ಸ್ಪಷ್ಟಪಡಿಸಿದರು.
ಮಾಣಿ- ಸಂಪಾಜೆ ಚತುಷ್ಪಥ:
ಇಲ್ಲಿನ ಮಾಣಿ - ಸಂಪಾಜೆ ಚತುಷ್ಪಥ ರಸ್ತೆ ಅಭಿವೃದ್ಧಿ ಬಗ್ಗೆ ಡಿಪಿಆರ್ ಸಿದ್ಧಪಡಿಸಲಾಗಿದ್ದು, ರೂ 50 ಕೋಟಿ ಮೊತ್ತದ ನಿರ್ವಹಣಾ ವೆಚ್ಚ ಕಾದಿರಿಸಲಾಗಿದೆ.
ತಲಪಾಡಿ-
ಕುಂದಾಪುರ ಸರ್ವಿಸ್ ರಸ್ತೆ :
ಇನ್ನೊಂದೆಡೆ ತಲಪಾಡಿ- ಕುಂದಾಪುರ ನಡುವಿನ ರಾಷ್ಟ್ರೀಯ ಹೆದ್ದಾರಿ ರಸ್ತೆಗೆ ಸವರ್ಿಸ್ ರಸ್ತೆ ನಿಮರ್ಾಣಗೊಳ್ಳಲಿದೆ.
ಮಂಗಳೂರು ನಗರದಲ್ಲಿ ವಾಹನದಟ್ಟಣೆ ನಿಯಂತ್ರಿಸಲು ಅಂಡರ್ ಪಾಸ್, ಮೇಲ್ಸೇತುವೆ ಮತ್ತು ಬೈಪಾಸ್ ರಸ್ತೆ ನಿರ್ಮಾಣಕ್ಕೆ ಚಿಂತನೆ ನಡೆಸಲಾಗಿದೆ ಎಂದು ಅವರು ತಿಳಿಸಿದರು.
ಶಾಸಕ ರಾಜೇಶ ನಾಯ್ಕ್ ಉಳಿಪಾಡಿ ಮಾತನಾಡಿ, 'ಬಿ.ಸಿ.ರೋಡಿನಲ್ಲಿ ಬಹುವರ್ಷಗಳ ಬೇಡಿಕೆ ಈಡೇರಿಕೆಗೆ ಸೂಕ್ತ ದಿನ ಕೂಡಿ ಬಂದಿದೆ' ಎಂದರು.
ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ, ಬಿಜೆಪಿ ಕ್ಷೇತ್ರಾಧ್ಯಕ್ಷ ಆರ್. ಚೆನ್ನಪ್ಪ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ, ಶಿವಪ್ರಸಾದ್ ಶೆಟ್ಟಿ, ಪ್ರಮುಖರಾದ ಕೆ.ಹರಿಕೃಷ್ಣ ಬಂಟ್ವಾಳ, ಸಂದೇಶ್ ಶೆಟ್ಟಿ ಅರೆಬೆಟ್ಟು, ವಿಕಾಸ್ ಪುತ್ತೂರು, ಸುಲೋಚನಾ ಜಿ.ಕೆ. ಭಟ್, ದಿನೇಶ್ ಅಮ್ಟೂರು, ಮಾಧವ ಮಾವೆ, ಎ.ಗೋವಿಂದ ಪ್ರಭು, ಬಿ.ದಿನೇಶ್ ಭಂಡಾರಿ, ಜನಾರ್ದನ ಬೊಂಡಾಲ ಮತ್ತಿತರರು ಇದ್ದರು.











