Coastal Bulletin

ಬಂಟ್ವಾಳ : ಕರಿಯಂಗಳ ಗ್ರಾಮದ ನಾಗರೀಕರ ಪರವಾಗಿ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪಚ್ಚಿನಡ್ಕ ಸೇಸಪ್ಪ ಕೋಟ್ಯಾನ್ ಹಾಗೂ ಕರ್ನಾಟಕ ಬ್ಯಾಂಕ್ ನ ಮಾಜಿ ಅಧ್ಯಕ್ಷರು ಪೊಳಲಿ ಜಯರಾಮ್ ಭಟ್ ಇವರಿಗೆ ಡಿ.8ರಂದು ಗುರುವಾರ ಪೊಳಲಿ ದೇವಸ್ಥಾನದ ಚೆಂಡಿನ ಗದ್ದೆಯಲ್ಲಿ ಪೌರ ಸನ್ಮಾನ ಕಾರ್ಯಕ್ರಮ ನಡೆಯಲಿದೆ.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟ್ವಾಳ ತಾಲ್ಲೂಕಿನ ಶಾಸಕರು ಶ್ರೀ ರಾಜೇಶ್ ನ್ಯಾಕ್ ಉಳಿಪ್ಪಾಡಿಗುತ್ತು ಇವರು ವಹಿಸಲಿದ್ದಾರೆ. ಪೊಳಲಿ ರಾಮಕೃಷ್ಣ ತಪೋವನದ ವಿವೇಕ ಚೈತನ್ಯಾನಂದ ಸ್ವಾಮೀಜಿ ಆಶಿರ್ವಚನ ನೀಡಲಿದ್ದಾರೆ. ವಿಧ್ವಾನ್ ಜ್ಯೋತಿಷ್ಯ ಶ್ರೀ ಕೋಡಿಮಜಲು ಅನಂತ ಪದ್ಮನಾಭ ಉಪಾದ್ಯಾಯ ಶುಭಾಶಂಸನೆ ಮಾಡಲಿದ್ದಾರೆ ಹಾಗೂ ಮುಖ್ಯ

ಅತಿಥಿಗಳಾಗಿ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರರು ಡಾ.ಮಂಜಯ್ಯ ಶೆಟ್ಟಿ ಭಾಗವಹಿಸಲಿದ್ದಾರೆ.

ರಾತ್ರಿ 8 ಗಂಟೆಯಿಂದ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ನಿರ್ದೇಶನದಲ್ಲಿ ಕಲಾಸಂಗಮ ಕಲಾವಿದರಿಂದ ಶಿವ ದೂತೆ ಗುಳಿಗ ಎಂಬ ಭಕ್ತಿ ಪೂರ್ವಕ ತುಳ ನಾಟಕ ಜರಗಲಿದೆ ಎಂದು ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment