ಬಂಟ್ವಾಳ :ಹಿಂದು ಜಾಗರಣಾ ವೇದಿಕೆ ಬಂಟ್ವಾಳ ತಾಲೂಕು ಸಮಿತಿ ಇದರ ಆಶ್ರಯದಲ್ಲಿ ಅಯೋಧ್ಯೆ ಶ್ರೀ ರಾಮ ಜನ್ಮಸ್ಥಾನದ ಮುಕ್ತಿ ಆಂದೋಲನದ ವಿಜಯೋತ್ಸವದ ಅಂಗವಾಗಿಡಿ. 6ರಂದು ಶ್ರೀ ರಕ್ತೇಶ್ವರಿ ದೇವಸ್ಥಾನ ಬಿ.ಸಿ.ರೋಡು ಇಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಪರಮಪೂಜ್ಯ ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠ ಉಪ್ಪಳ ಇವರು ವಹಿಸಿದ್ದರು. ದಿಕ್ಸೂಚಿ ಭಾಷಣವನ್ನು ಖ್ಯಾತ ಯಕ್ಷಗಾನ ಕಲಾವಿದ ದಿನೇಶ್ ಶೆಟ್ಟಿ ಕಾವಳಕಟ್ಟೆ ನೆರವೇರಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಲೋಕಯ್ಯ ಸೇರಾ
ವಹಿಸಿದ್ದರು.
ಕಾರ್ಯಕ್ರಮದಲ್ಲಿ ಹಿಂಜಾವೇ ಪ್ರಾಂತ ಕಾರ್ಯಕಾರಿಣಿ ಸದಸ್ಯರಾದ ಪ್ರಶಾಂತ್ ಕೆಂಪುಗುಡ್ಡೆ, ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಉಪಸ್ಥಿತರಿದ್ದರು. ಬಂಟ್ವಾಳ ತಾಲೂಕು ಹಿಂಜಾವೇ ಸಂಯೋಜಕ ಚಿದಾನಂದ ಕುಜ್ಲುಬೆಟ್ಟು ಸ್ವಾಗತಿಸಿ, ಗುರುಪ್ರಿಯ ನಾಯಕ್ ವೈಯಕ್ತಿಕ ಗೀತೆ ಹಾಗೂ ವಂದೇಮಾತರಂ ಗೀತೆ ಹಾಡಿದರು.ದುರ್ಗಾದಾಸ್ ಕಡೇಶಿವಾಲ್ಯಯ ಕಾರ್ಯಕ್ರಮವನ್ನು ನಿರೂಪಿಸಿ, ರಂಜಿತ್ ಧನುಪೂಜೆ ವಂದನಾರ್ಪಣೆಗೈದರು.















