ರಾಮಲ್ ಕಟ್ಟೆ : ಎಳೆಯರ ಬಳಗ ಹಾಗೂ ಮಹಿಳಾ ಮಂಡಳಿಯ ವಾರ್ಷಿಕೋತ್ಸವ ಸಮಾರಂಭ. ಸಂಘಟನೆಗಳು ಹಿಂದೂ ಸಮಾಜವನ್ನು ಜಾಗೃತಗೊಳಿಸಬೇಕಿದೆ: ಕ್ಯಾಪ್ಟನ್ ಬ್ರಿಜೇಶ್ ಚೌಟ

Coastal Bulletin
ರಾಮಲ್ ಕಟ್ಟೆ : ಎಳೆಯರ ಬಳಗ ಹಾಗೂ ಮಹಿಳಾ ಮಂಡಳಿಯ ವಾರ್ಷಿಕೋತ್ಸವ ಸಮಾರಂಭ. ಸಂಘಟನೆಗಳು ಹಿಂದೂ ಸಮಾಜವನ್ನು ಜಾಗೃತಗೊಳಿಸಬೇಕಿದೆ: ಕ್ಯಾಪ್ಟನ್ ಬ್ರಿಜೇಶ್ ಚೌಟ

ಬಂಟ್ವಾಳ :ಸಂಘಟನೆಗಳು ಹಿಂದೂ ಸಮಾಜಕ್ಕೆ ಶಕ್ತಿ ತುಂಬುವ ಹಾಗೂ ಸಮಾಜವನ್ನು ಜಾಗೃತಿಗೊಳಿಸುವ ಕಾರ್ಯಕ್ಕೆ ಮುಂದಾಗಬೇಕು ಈ ನಿಟ್ಟಿನಲ್ಲಿ ಎಳೆಯರ ಬಳಗ ಸದೃಢ ಸಂಘಟನೆಯಾಗಿ ಕ್ರಿಯಾಶೀಲ, ಸಮಾಜಮುಖಿ ಕೆಲಸ ಮಾಡುತ್ತ ಬರುತ್ತಿರುವುದು ಶ್ಲಾಘನೀಯ ಎಂದು ದ ಕ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದರು.

ಅವರು ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ರಾಮಲ್‌ಕಟ್ಟೆಯ ಎಳೆಯರ ಬಳಗ (ರಿ.) ಮತ್ತು ಎಳೆಯರ ಬಳಗ ಮಹಿಳಾ ಮಂಡಳಿ ಇದರ ವಾರ್ಷಿಕ ಪೂಜಾ ಮಹೋತ್ಸವ ಹಾಗೂ ವಾರ್ಷಿಕೋತ್ಸವದ ಅಂಗವಾಗಿ ಜ. 7ರಂದು ಮಂಗಳವಾರ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮುಖ್ಯ ಅತಿಥಿ ಶ್ರೀ ಗೋಕರ್ಣನಾಥ ಕ್ಷೇತ್ರ, ಕುದ್ರೋಳಿ ಇದರ ಕೋಶಾಧಿಕಾರಿ ಪದ್ಮರಾಜ್ ಆರ್.ಮಾತನಾಡಿ ಮಾನವ ಧರ್ಮ ಶ್ರೇಷ್ಠ, ನಮ್ಮೊಂದಿಗೆ ಇನ್ನೊಬ್ಬರಿಗೊ ಒಳಿತಾಗಲಿ ಎನ್ನುವ ಗುಣ ನಮ್ಮಲ್ಲಿರಲಿ,ಸಮಾಜದಲ್ಲಿ ಸುಖ ಶಾಂತಿ ನೆಲೆಸಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣ ಕುಮಾರ್ ಪೂಂಜ ಮಾತನಾಡಿ, ಸಮಾಜ ಸೇವೆಯಿಂದ ಜೀವನವನ್ನು ಸಾರ್ಥಕ್ಯ ಮಾಡೋಣ,ಪರೋಪಕಾರವೇ ಪರಮ ಧರ್ಮ, ಎಳೆಯರ ಬಳಗ ಸಮಾಜಕ್ಕೆ ಶಕ್ತಿಯಾಗಿ, ನಿರಂತರವಾಗಿ ಸಮಾಜಮುಖಿ ಕೆಲಸದಲ್ಲಿ ತೊಡಗಿಸಿಕೊಳ್ಳಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ನಿರ್ಮಾಣದ ರೂವಾರಿ ಮಾಜಿ ಜಿ ಪಂ ಸದಸ್ಯ ಚಂದ್ರಪ್ರಕಾಶ ಶೆಟ್ಟಿ ಹಾಗೂ ಜಿಲ್ಲಾ ರಾಜ್ಯೋತ್ಸವ

ಪ್ರಶಸ್ತಿ ಪುರಸ್ಕೃತ ಸಾಧಕ ಮನೋಜ್ ಕನಪಾಡಿಯವರನ್ನು ಸನ್ಮಾನಿಸಲಾಯಿತು.

ಕುಣಿತ ಭಜನಾ ಗುರುಗಳಾದ ಚಿತ್ತರಂಜನ್ ಹಾಗೂ ಸಂದೀಪ್, ನಾಟಕ ಕಲಾವಿದ ಪ್ರವೀಣ್ ಕೊಡಕ್ಕಲರನ್ನು ಗೌರವಿಸಲಾಯಿತು. ವಾರ್ಷಿಕೋತ್ಸವದ ಪ್ರಯುಕ್ತ ನಡೆದ ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ವೇದಿಕೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆ ಸದಸ್ಯೆ ಚಂದ್ರಾವತಿ, ತುಂಬೆ ಗ್ರಾ ಪಂ ಉಪಾಧ್ಯಕ್ಷ ಗಣೇಶ್ ಸಾಲಿಯಾನ್, ವೈದ್ಯನಾಥ ದೈವಸ್ಥಾನದ ಅಧ್ಯಕ್ಷ ಗಣೇಶ್ ಸುವರ್ಣ ತುಂಬೆ, ಜ್ಯೋತಿಷ್ಯ ಅನಿಲ್ ಪಂಡಿತ್ ಬ್ರಹ್ಮರಕೂಟ್ಲು,ತುಂಬೆ ಶಿಕ್ಷಣ ಸಂಸ್ಥೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ನಿಸಾರ್ ಅಹ್ಮದ್ ವಳವೂರು, ಎಳೆಯರ ಬಳಗದ ಅಧ್ಯಕ್ಷ ಪೂಜೇಶ್ ಆಚಾರ್ಯ ರಾಮಲ್ ಕಟ್ಟೆ ಮಹಿಳಾ ಮಂಡಳಿಯ ಅಧ್ಯಕ್ಷೆ ಜಯಂತಿ ಶ್ರೀಧರ್ ಬರೆ ಉಪಸ್ಥಿತರಿದ್ದರು.

ಶ್ರೀಮತಿ ನಿಶ್ಮಿತಾ ಸ್ವಾಗತಿಸಿ, ಕುಮಾರಿ ಧನ್ಯ ಬಹುಮಾನದ ಪಟ್ಟಿ ವಾಚಿಸಿದರು,ಉಮೇಶ್ ಕುಮಾರ್ ರೆಂಜೋಡಿ ಕಾರ್ಯಕ್ರಮ ನಿರೂಪಿಸಿದರು.

ಬೆಳಿಗ್ಗೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆದು ಅನ್ನಸಂತರ್ಪಣೆ ನಡೆಯಿತು, ಸಂಜೆ ಕುಣಿತ ಭಜನೆ ಹಾಗೂ ರಾತ್ರಿ ಕಾಪು ರಂಗತರಂಗ ಕಲಾವಿದರಿಂದ "ಕುಟ್ಯಣ್ಣನ ಕುಟುಂಬ" ತುಳು ನಾಟಕ ಜರುಗಿತು

Leave a Comment