ಪಾಣೆಮಂಗಳೂರು: ಶ್ರೀ ಭಯಂಕೇಶ್ವರ ಸದಾಶಿವ ದೇವಸ್ಥಾನದಲ್ಲಿ ಬ್ರಹ್ಮಕಲಶಾಭಿಷೇಕ ಸಂಪನ್ನ.

Coastal Bulletin
ಪಾಣೆಮಂಗಳೂರು: ಶ್ರೀ ಭಯಂಕೇಶ್ವರ ಸದಾಶಿವ ದೇವಸ್ಥಾನದಲ್ಲಿ ಬ್ರಹ್ಮಕಲಶಾಭಿಷೇಕ ಸಂಪನ್ನ.

ಬಂಟ್ವಾಳ :ಪಾಣೆಮಂಗಳೂರು ಶ್ರೀ ಭಯಂಕೇಶ್ವರ ಸದಾಶಿವ ದೇವಸ್ಥಾನದಲ್ಲಿ ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳವರ ನೇತೃತ್ವದಲ್ಲಿ ಮಾ 8ರಂದು ಶುಕ್ರವಾರ ಬೆಳಗ್ಗೆ 9.06ರಿಂದ 10.34ರ ತನಕದ ಶ್ರವಣ ನಕ್ಷತ್ರದ ಸುಮುಹೂರ್ತದಲ್ಲಿ ಅಷ್ಟಬಂಧ ಲೇಪನ, ಪರಿಕಲಶಾಭಿಷೇಕ, ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮಗಳು ಸಂಪನ್ನಗೊಂಡಿತು.

ಬ್ರಹ್ಮಕಲಶೋತ್ಸವ ನಡೆಯುವ ಸಂದರ್ಭದಲ್ಲಿ ದೇವಸ್ಥಾನದ ಪ್ರಾಂಗಣದಲ್ಲಿ ವಿವಿಧ ಭಜನಾ ತಂಡಗಳಿಂದ ನೃತ್ಯಭಜನೆ ನಡೆಯಿತು. ಈ ಕಾರ್ಯಕ್ರಮವನ್ನು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಮತ್ತು ಡಾ. ಕಮಲಾ ಪ್ರಭಾಕರ ಭಟ್ ದೀಪ ಪ್ರಜ್ವಲನೆ ಮೂಲಕ ಚಾಲನೆ ನೀಡಿದರು. ದೇವರನ್ನು ಒಲಿಸುವ ಮುಖ್ಯ ಕಾರ್ಯವನ್ನು ಭಜನೆಯಿಂದ ಮಾಡಲು ಸಾಧ್ಯ ಎಂದು ಡಾ. ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಮತ್ತು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬಿ.ರಘುನಾಥ ಸೋಮಯಾಜಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಜಗನ್ನಾಥ ಬಂಗೇರ ನಿರ್ಮಲ್, ಕಾರ್ಯದರ್ಶಿ ಪದ್ಮನಾಭ ಮಯ್ಯ ಏಲಬೆ, ಸಂಚಾಲಕ ಪ್ರಕಾಶ್ ಕಾರಂತ ನರಿಕೊಂಬು, ಉದ್ಯಮಿಗಳಾದ ಗಣೇಶ್

ರಾವ್, ಸಾಯಿಚಂದ್ ಜೈನ್‌, ಪುರೋಹಿತರಾದ ವೇ.ಮೂ.ವೆಂಕಪ್ಪಯ್ಯ ಭಟ್, ವ್ಯವಸ್ಥಾಪನಾ ಸಮಿತಿ ಕಾರ್ಯದರ್ಶಿ ಲೋಕೇಶ್ ಕೆ. ನರಹರಿನಗರ, ನೃತ್ಯಭಜನೆ ಸಂಯೋಜಕರಾದ ಯೋಗೀಶ್ ಸಪಲ್ಯ ಬೋಳಂತೂರು ಉಪಸ್ಥಿತರಿದ್ದರು. ದಾಮೋದರ ನೆತ್ತರಕೆರೆ ಕಾರ್ಯಕ್ರಮ ನಿರ್ವಹಿಸಿದರು.

ಬ್ರಹ್ಮಕಲಶ ಸಂದರ್ಭದಲ್ಲಿ ವ್ಯವಸ್ಥಾಪನಾ ಮತ್ತು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬಿ.ರಘುನಾಥ ಸೋಮಯಾಜಿ ಎರಕಳ, ಉಪಾಧ್ಯಕ್ಷ ಬಿ.ರಘು ಸಪಲ್ಯ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಜಗನ್ನಾಥ ಬಂಗೇರ, ಸಂಚಾಲಕ ಪ್ರಕಾಶ್ ಕಾರಂತ, ಕಾರ್ಯಾಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ, ಕಾರ್ಯದರ್ಶಿ ಪದ್ಮನಾಭ ಮಯ್ಯ ಏಲಬೆ, ವ್ಯವಸ್ಥಾಪನಾ, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಲೋಕೇಶ್ ಕೆ. ನರಹರಿನಗರ, ಕೋಶಾಧಿಕಾರಿ ಕೆ.ಶಂಕರನಾರಾಯಣ ರಾವ್, ವಿವಿಧ ಸಮಿತಿಗಳ ಪ್ರಮುಖರು, ಸಂಚಾಲಕರು, ಸಹಸಂಚಾಲಕರು, ಪದಾಧಿಕಾರಿಗಳು ಹಾಗೂ ಸ್ಥಳೀಯ ಭಕ್ತರು ಉಪಸ್ಥಿತರಿದ್ದರು

Leave a Comment