ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಮುಖ್ಯವಾಹಿನಿಗೆ ತರುವುದೇ ಸರಕಾರದ ಗುರಿ ಮುಂದಿನ ಬಾರಿ ರೈ ಯವರನ್ನು ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಿ ಬಂಟ್ವಾಳ ಕಂಬಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ.

Coastal Bulletin
ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಮುಖ್ಯವಾಹಿನಿಗೆ ತರುವುದೇ ಸರಕಾರದ ಗುರಿ ಮುಂದಿನ ಬಾರಿ ರೈ ಯವರನ್ನು ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಿ ಬಂಟ್ವಾಳ ಕಂಬಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ.

ಬಂಟ್ವಾಳ :ಈ ಜಿಲ್ಲೆಯ ಜನರು ಬುದ್ದಿವಂತರು, ವಿದ್ಯಾವಂತರು, ಸಾಹಸಪ್ರಿಯರು, ಜಾತ್ಯತೀತ ಧರ್ಮಾತೀತವಾಗಿ ನಡೆಯುವ ಬಂಟ್ವಾಳ ಕಂಬಳವನ್ನು ಸಂತೋಷದಿಂದ ಉದ್ಘಾಟಿಸಿದ್ದೇನೆ, ನಮ್ಮ ಅಧಿಕಾರಾವಧಿಯಲ್ಲಿ ಕಂಬಳ ಕ್ರೀಡೆಗೆ ಸರಕಾರ ಪ್ರೋತ್ಸಾಹ, ಆರ್ಥಿಕ ಸಹಕಾರ ನೀಡುತ್ತಾ ಬಂದಿದೆ ಮುಂದೆಯೂ ಕೊಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.


ಅವರು ಬಂಟ್ವಾಳದ ನಾವೂರು ಗ್ರಾಮದ ಕೂಡಿಬೈಲಿನಲ್ಲಿ ನಡೆಯಲಿರುವ ಮೂಡೂರು-ಪಡೂರು ಬಂಟ್ವಾಳ ಕಂಬಳದಲ್ಲಿ ಮಾ. 7ರಂದು ಶನಿವಾರ ಸಂಜೆ ಮಾತನಾಡಿದರು.

ಸಮಾಜದಲ್ಲಿ ಬಡವರು, ದಲಿತರು, ಹಿಂದುಳಿದವರು, ರೈತರು, ಅಲ್ಪಸಂಖ್ಯಾತರು, ಕಾರ್ಮಿಕರು ಹೀಗೆ ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಮುಖ್ಯವಾಹಿನಿಗೆ ತಂದು ಸ್ವಾವಲಂಬಿಗಳನ್ನಾಗಿ ಮಾಡುವುದೇ ಸರಕಾರದ ಪರಮ ಗುರಿ, ಪ್ರತಿಯೊಬ್ಬರೂ ಆರ್ಥಿಕವಾಗಿ ಸಾಮಾಜಿಕವಾಗಿ ಸದೃಢ ವಾಗಬೇಕು ಅದಕ್ಕಾಗಿ  ಐದು ಗ್ಯಾರಂಟಿ ಯೋಜನೆ ಜಾರಿಗೆ ತರಲಾಗಿದೆ ಎಂದರು.

ರಾಜಕೀಯ ಪ್ರಜಾಪ್ರಭುತ್ವದೊಂದಿಗೆ ಸಾಮಾಜಿಕ, ಆರ್ಥಿಕ ಪ್ರಜಾಪ್ರಭುತ್ವ ಸಾಧಿಸಬೇಕು, ಅವಕಾಶ ವಂಚಿತರಿಗೆ ಶಕ್ತಿ ತುಂಬುವ ಕೆಲಸ ನಮ್ಮ ಸರಕಾರ ಹಿಂದೆಯೂ ಮಾಡಿದೆ ಮುಂದೆಯೂ ಮಾಡುತ್ತಿದೆ ಎಂದರು.

ಮುಂದಿನ ಬಾರಿ ರೈಯನ್ನು ಗೆಲ್ಲಿಸಿ :

ಪ್ರಾಮಾಣಿಕ ಸರಳ ಸಜ್ಜನ ರಾಜಕಾರಣಿ ರಮಾನಾಥ ರೈಯವರು 5000ಕೋಟಿ ಅನುದಾನವನ್ನು ಅವರ ಅಧಿಕಾರವಾದಿಯಲ್ಲಿ ಬಂಟ್ವಾಳ ಕ್ಷೇತ್ರಕ್ಕೆ ತಂದು ಅಭಿವೃದ್ಧಿ ಕಾರ್ಯ ಮಾಡಿದ್ದಾರೆ ಆದರೂ ಅವರನ್ನು ಕ್ಷೇತ್ರದ ಜನ ಸೋಲಿಸಿದ್ದು ಅತ್ಯಂತ ನೋವಿನ ಸಂಗತಿ, 2028ರಲ್ಲಿ ಮತ್ತೆ ಅವರೇ ಅಭ್ಯರ್ಥಿ

ಆಗ್ತಾರೆ, ಹೆಚ್ಚು ಮತಗಳ ಅಂತರದಿಂದ ಅವರನ್ನು ಗೆಲ್ಲಿಸಿ ಎಂದು ಬಿನ್ನಹಿಸಿದರು. 

ಮಾಜಿ ಸಚಿವ ಬಿ. ರಮಾನಾಥ ರೈ ಪ್ರಸ್ತವಿಕವಾಗಿ ಮಾತನಾಡಿ ಬೆಂಜನಪದವಿನಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಅನುದಾನದ ಮನವಿ ಮಾಡಿದರು,ಕಂಬಳ ಸಮಿತಿಯ ಅಧ್ಯಕ್ಷ ಪಿಯೂಸ್ ಎಲ್ ರೋಡ್ರಿಗಸ್ ಸ್ವಾಗತಿಸಿ ಬಾಲಕೃಷ್ಣ ಆಳ್ವ ಕೊಡಾಜೆ ನಿರೂಪಿಸಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಎಂಎಲ್‌ಸಿ ಸಲೀಮ್ ಆಹ್ಮದ್, ಐವನ್ ಡಿಸೋಜ, ಶಾಸಕ ಅಶೋಕ್ ಕುಮಾ‌ರ್ ರೈ, ಮಾಜಿ ಸಚಿವ ವಿನಯ ಕುಮಾ‌ರ್ ಸೊರಕೆ, ವಿವಿಧ ನಿಗಮದ ಅಧ್ಯಕ್ಷರಾದ ಲಾವಣ್ಯ ಬಲ್ಲಾಳ್, ಟಿ.ಎಮ್ ಶಹೀದ್ ತೆಕ್ಕಿಲ್, ಮಮತಾ ಡಿ.ಎಸ್‌. ಗಟ್ಟಿ, ಶಾಲೆಟ್ ಪಿಂಟೋ, ಸದಾಶಿವ ಉಳ್ಳಾಲ್, ಸಿಎಂ ಅವರ ಮಾಧ್ಯಮ ಸಲಹೆಗಾರ ಪ್ರಭಾಕರ್, ಕೆಪಿಸಿಸಿ ಪ್ರ. ಕಾರ್ಯದರ್ಶಿಗಳಾದ ಪದ್ಮರಾಜ್ ಆರ್ ಪೂಜಾರಿ, ಕೃಪಾ ಆಳ್ವ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಚೆನ್ನವೇಣಿ ಶೆಟ್ಟಿ, ನ್ಯಾಯವಾದಿ ಅಶ್ವನಿಕುಮಾರ್ ರೈ, ದೀಪಕ್ ಕುಮಾ‌ರ್ ರೈ,ಉದ್ಯಮಿ ಉದಯಹೆಗ್ಡೆ, ಪ್ರತಿಭಾ ಕುಳಾಯಿ ಅನೇಕ ಗಣ್ಯರು, ಕಂಬಳ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.


Leave a Comment