ಬಿ ಸಿ ರೋಡ್ :ಬಿಲ್ಲವ ಸಮಾಜದ ಕುರಿತು ಅವಹೇಳನಕಾರಿ ಹೇಳಿಕೆ :ಕಾನೂನು ಕ್ರಮಕ್ಕೆ ಆಗ್ರಹಿಸಿ ಮನವಿ.

Coastal Bulletin
ಬಿ ಸಿ ರೋಡ್ :ಬಿಲ್ಲವ ಸಮಾಜದ ಕುರಿತು ಅವಹೇಳನಕಾರಿ ಹೇಳಿಕೆ :ಕಾನೂನು ಕ್ರಮಕ್ಕೆ ಆಗ್ರಹಿಸಿ ಮನವಿ.

ಬಂಟ್ವಾಳ :ಸಾಮಾಜಿಕ ಜಾಲತಾಣದಲ್ಲಿ ಬಿಲ್ಲವ ಸಮಾಜದ ಕುರಿತು ಕೀಳಾಗಿ ಮಾತನಾಡಿರುವ ಜತೆಗೆ ಅವಹೇಳನಕಾರಿ ಪದ ಬಳಕೆ ಮಾಡಿರುವ ಅನಿತಾ ಕಾಸರಗೋಡು ಎಂಬ ಮಹಿಳೆಯ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಮನವಿ ಸಲ್ಲಿಸಲಾಯಿತು.

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ಅಧ್ಯಕ್ಷ ಭುವನೇಶ್ ಪಚಿನಡ್ಕ ಇವರ ನೇತೃತ್ವದಲ್ಲಿ ತಾಲೂಕಿನ ವಿವಿಧ ಬಿಲ್ಲವ ಸಂಘಗಳ ಉಪಸ್ಥಿತಿಯಲ್ಲಿ ತಾಲೂಕು ಕಛೇರಿ ಬಂಟ್ವಾಳ ದಲ್ಲಿ ಹರಿಕೃಷ್ಣ ಬಂಟ್ವಾಳ ಖಂಡನಾ ನಿರ್ಣಯ ಹಕ್ಕೋತ್ತಾಯವನ್ನು ಮಂಡಿಸಿ ಬಂಟ್ವಾಳ ತಹಶೀಲ್ದಾರರು ಮಂಜುನಾಥ್ ಇವರಿಗೆ ಮನವಿ ನೀಡಲಾಯಿತು ಹಾಗೂ ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅಧಿಕಾರಿ ಯಶ್ ಕುಮಾರ್ ಶರ್ಮಾ ಇವರಿಗೂ ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿ ಬೂಡದ ಅದ್ಯಕ್ಷರು ಬೇಬಿ ಕುಂದರ್, ಸಂಘದ ಮಾಜಿ ಅಧ್ಯಕ್ಷರುಗಳು ರಾಮಪ್ಪ ಪೂಜಾರಿ, ಸಂಜೀವ ಪೂಜಾರಿ

ಉಪಾಧ್ಯಕ್ಷ ಜಯಪ್ರಕಾಶ್ ಜೆ ಎಸ್, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ಪೂಜಾರಿ ಮೆಲ್ಕಾರ್, ಜತೆ ಕಾರ್ಯದರ್ಶಿ ಆನಂದ ಸಾಲ್ಯಾನ್, ಕೋಶಾಧಿಕಾರಿ ಸುನೀಲ್ ಕುಂದರ್, ಲೆಕ್ಕಪರಿಶೋಧಕರು ಪ್ರಶಾಂತ್ ಕೋಟ್ಯಾನ್. ಯುವವಾಹಿನಿ ಬಂಟ್ವಾಳ ಘಟಕದ ನಿಯೋಜಿತ ಅಧ್ಯಕ್ಷ ಕಿರಣ್ ರಾಜ್ ಪೂಂಜೆರೆಕೋಡಿ, ತಾಲೂಕು ಮಹಿಳಾ ಸಮಿತಿ ಅಧ್ಯಕ್ಷೆ ರಾಗಿಣಿ ಮಾಧವ, ಉದ್ಯಮಿ ಪ್ರಕಾಶ್ ಅಂಚನ್ , ಕಾರಿಂಜ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವೀರೇಂದ್ರ ಅಮೀನ್, ಸಿದ್ಧಕಟ್ಟೆ ಬಿಲ್ಲವ ಸಂಘದ ಅಧ್ಯಕ್ಷರು ಕಿರಣ್ ಕುಮಾರ್ ಮಂಜಿಲ ಹಾಗೂ ತಾಲೂಕಿನ ವಿವಿಧ ಬಿಲ್ಲವ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Comment