ಬಂಟ್ವಾಳ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಮಂಗಳೂರು ಇದರ ವತಿಯಿಂದ ಕಾವಳಪಡೂರು ಗ್ರಾಮಪಂಚಾಯತಿಯ ಕಾವಳಪಡೂರು ಹಾಗೂ ಕಾಡಬೆಟ್ಟು ಗ್ರಾಮ ವನ್ನು ಹರ್ ಘರ್ ಜಲ್ ಗ್ರಾಮವಾಗಿ ಘೋಷಣೆ ಮಾಡಲಾಗಿದೆ. (ಪ್ರತಿ ಮನೆಗೂ ಕಾರ್ಯಾತ್ಮಕ ನಳ ಸಂಪರ್ಕ) ಜಲಜೀವನ್ ಮಿಷನ್ ಆಶಯದಂತೆ ಎಲ್ಲ ಮನೆಗಳಿಗೂ ನಲ್ಲಿ ಸಂಪರ್ಕ ಕಲ್ಪಿಸಲಾಗಿದ್ದು ಈಗ ಪಂಚಾಯತ್ ತನ್ನ ಗುರಿ ಮುಟ್ಟಿದೆ.
ಜು.6 ರಂದು ಶನಿವಾರ ಕಾವಳಪಡೂರು ಗ್ರಾಮ ಪಂಚಾಯತಿನಲ್ಲಿ ಹರ್ ಘರ್ ಜಲ್ ಗ್ರಾಮ ಘೋಷಣೆ ಕಾರ್ಯಕ್ರಮ ನಡೆಸಲಾಯಿತು. ಗ್ರಾ. ಪಂ ಅಧ್ಯಕ್ಷ , ಉಪಾಧ್ಯಕ್ಷ , ಪಂಚಾಯತ್ ಅಭಿವೃದ್ದಿ ಅಧಿಕಾರಿ , ಪಂಚಾಯತಿ ಕಾರ್ಯದರ್ಶಿ , ಪಂಚಾಯತ್ ಸದಸ್ಯರು, ನೀರು ಮತ್ತು ನೈರ್ಮಲ್ಯ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು, ಪಂಪು ಚಾಲಕರು, ಗ್ರಾಮಸ್ಥರು,
ಫಲಾನುಭವಿಗಳ ಸಮ್ಮುಖದಲ್ಲಿ ಪೆರಾಜೆ ಗ್ರಾಮವನ್ನು ಹರ್ ಘರ್ ಜಲ್ ಗ್ರಾಮ ಎಂದು ಘೋಷಣೆ ಮಾಡಲಾಯಿತು.
ಜಲಜೀವನ್ ಮಿಷನ್‌ನ ಯೋಜನಾ ವ್ಯವಸ್ಥಾಪಕ ವಿಘ್ನೇಶ್‌ರಾಜ್, ಎಂಜಿನಿಯರ್ ನಾಸೀರ್ ಹಾಗು ಅಶ್ವಿನ್, ಜೆಜೆಎಮ್ ಅನುಷ್ಠಾನ ಬೆಂಬಲ ಸಂಸ್ಥೆಯ ಎಚ್‌ಆರ್‌ಡಿ ಚರಣ್‌ರಾಜ್, ಜೆಜೆಎಮ್ ಅನುಷ್ಠಾನ ಬೆಂಬಲ ಸಂಪನ್ಮೂಲ ಸಂಸ್ಥೆ ಗ್ರಾಮ್ಸ್ ನ ಸಿಬ್ಬಂದಿಗಳಾದ ವಿಲ್ಮಾ, ಗುಣವತಿ ಹಾಗು ಚಂದ್ರಶೇಖರ್ ಉಪಸ್ಥಿತರಿದ್ದರು.
















