ಬಂಟ್ವಾಳ: ತಾಲೂಕಿನ ವಿವಿಧೆಡೆ ಸಂಭ್ರಮದ ವರಮಹಾಲಕ್ಷ್ಮಿ ಪೂಜೆ.

Coastal Bulletin
ಬಂಟ್ವಾಳ: ತಾಲೂಕಿನ ವಿವಿಧೆಡೆ ಸಂಭ್ರಮದ ವರಮಹಾಲಕ್ಷ್ಮಿ ಪೂಜೆ.

ಬಂಟ್ವಾಳ: ತಾಲ್ಲೂಕಿನ ವಿವಿಧೆಡೆ ಹಲವು ದೇವಸ್ಥಾನ ಮತ್ತು ಸಂಘ ಸಂಸ್ಥೆಗಳ ವತಿಯಿಂದ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ ಶುಕ್ರವಾರ ನಡೆಯಿತು. ಇಲ್ಲಿನ ಬಿ.ಸಿ.ರೋಡು ಶ್ರೀ ರಕ್ತೇಶ್ವರಿ ದೇವಿ ಮತ್ತು ಚಂಡಿಕಾಪರಮೇಶ್ವರಿ ದೇವಸ್ಥಾನದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ ನಡೆಯಿತು.

ಬಿ.ಸಿ.ರೋಡು ಪೊಲೀಸ್ ಲೇನ್ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ವಹಮಹಾಲಕ್ಷ್ಮಿ ಪೂಜೆ ಪ್ರಯುಕ್ತ ಅಪಾರ ಮಂದಿ ಭಕ್ತರು ಪಾಲ್ಗೊಂಡಿದ್ದು, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಅರಳ ಶ್ರೀ ಗರುಡ ಮಹಾಕಾಳಿ ದೇವಸ್ಥಾನ, ವಾಮದಪದವು ಸಮೀಪದ ಅಜ್ಜಿಬೆಟ್ಟು ಶ್ರೀ ದುರ್ಗಾಪರಮೇರ್ಶವರಿ ದೇವಸ್ಥಾನ, ಸಿದ್ಧಕಟ್ಟೆ ಸಮೀಪದ

ಪೂಂಜ ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನ, ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಮಾವಿನಕಟ್ಟೆ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜಾ ಸಮಿತಿ, ಫರಂಗಿಪೇಟೆ ಹಿಂದೂ ಧಾರ್ಮಿಕ ಸೇವಾ ಸಮಿತಿ,ದೇವಂದಬೆಟ್ಟು ಶ್ರೀ ಲಕ್ಷ್ಮೀವಿಷ್ಣುಮೂರ್ತಿ ದೇವಸ್ಥಾನ, ಮತ್ತಿತರ ಕಡೆಗಳಲ್ಲಿ ನಡೆದ ಪೂಜೆಯಲ್ಲಿ ಅಪಾರ ಮಂದಿ ಮಹಿಳಾ ಭಕ್ತರು ಪಾಲ್ಗೊಂಡರು.

Leave a Comment