ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹಾಗು ಹಿರಿಯ ಪತ್ರಕರ್ತರಾದ ಶ್ರೀನಿವಾಸ ನಾಯಕ್ ಇಂದಾಜೆ ಸಹಿತ ಹಲವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಲಭಿಸಿದೆ. 2019, 2020, 2021 ಮತ್ತು 2022 ನೇ ಸಾಲಿನ ಮಾಧ್ಯಮ ವಾರ್ಷಿಕ ಪ್ರಶಸ್ತಿ ಮತ್ತು ದತ್ತಿ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗಿದ್ದು ಮಾಧ್ಯಮ ಕ್ಷೇತ್ರದಲ್ಲಿ ಮಾಡಿದ ಸಾಧನೆಗೆ 124 ಮಂದಿ ಪತ್ರಕರ್ತರನ್ನು ವಾರ್ಷಿಕ ಪ್ರಶಸ್ತಿಗೆ ಮತ್ತು 21 ಮಂದಿ ಪತ್ರಕರ್ತರನ್ನು ದತ್ತಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
2021ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ಶ್ರೀನಿವಾಸ ನಾಯಕ್ ಇಂದಾಜೆ ಅವರನ್ನು ಆಯ್ಕೆ ಮಾಡಲಾಗಿದೆ. ದ.ಕ.ಜಿಲ್ಲೆಯ ಹಿರಿಯ ಪತ್ರಕರ್ತರಾದ ಆನಂದ ಶೆಟ್ಟಿ, ಆರ್.ರಾಮಕೃಷ್ಣ, ಗುರುವಪ್ಪ ಬಾಳೆಪುಣಿ, ಪಿ.ಬಿ.ಹರಿಪ್ರಸಾದ್ ರೈ, ರವೀಂದ್ರ ಶೆಟ್ಟಿ,
ಎಸ್.ರವಿಪ್ರಕಾಶ್, ಸುಕನ್ಯ, ಕನ್ನಡ ಪ್ರಭ ವ್ಯಂಗ್ಯ ಚಿತ್ರಕಾರರಾದ ಸುಧಾಕರ ದರ್ಬೆ ಅವರಿಗೆ ವಾರ್ಷಿಕ ಪ್ರಶಸ್ತಿ ಲಭಿಸಿದೆ.
ಪ್ರದೀಶ್ ಮರೋಡಿ ಅವರಿಗೆ ಅತ್ಯುತ್ತಮ ಮಾನವೀಯ ಸಮಸ್ಯೆ ಲೇಖನಕ್ಕೆ ನೀಡುವ ಮೈಸೂರು ದಿಗಂತ ಪ್ರಶಸ್ತಿ ಲಭಿಸಿದೆ.














